ಸರಕಾರಿ ವಾಹನದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿದ ಶಾಸಕ ಪಾಟೀಲ್ ನಡಹಳ್ಳಿ - ಈಟಿವಿ ಭಾರತ ಕನ್ನಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16752816-thumbnail-3x2-yyy.jpg)
ಮುದ್ದೇಬಿಹಾಳ: ತಾಲೂಕಿನ ಅಡವಿ ಹುಲಗಬಾಳದ ದ್ಯಾಮವ್ವ ಜಾತ್ರೆ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಹೊರಟಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು 15 ಜನರು ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ, ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ತಮ್ಮ ಸರ್ಕಾರಿ ವಾಹನದಲ್ಲಿ ಅನುವು ಮಾಡಿಕೊಟ್ಟರು. ಗಾಯಾಳುಗಳಿಗೆ ಮುದ್ದೇಬಿಹಾಳದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Last Updated : Feb 3, 2023, 8:30 PM IST