ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ, ನನಗೆ ಇನ್ನಷ್ಟು ಆನೆ ಬಲ ಬಂದಿದೆ : ಸೋಮಶೇಖರ್ ರೆಡ್ಡಿ - ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ
🎬 Watch Now: Feature Video
ದಾವಣಗೆರೆ : ಸಚಿವ ಶ್ರೀ ರಾಮುಲು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಸಂಡೂರಿನಲ್ಲಿ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಸಮಾವೇಶ ಮಾಡಿದ್ದರು. ಇದೀಗ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀ ರಾಮುಲು ಸ್ಪರ್ಧೆ ಮಾಡುವುದಾಗಿ ಹೇಳಿರುವುದು ನನಗೆ ಮತ್ತಷ್ಟು ಆನೆ ಬಲ ಬಂದಂತಾಗಿದೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದರು.
ದಾವಣಗೆರೆಯಲ್ಲಿ ನಡೆಯುವ ಮೋದಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಬಳ್ಳಾರಿ ಅಖಂಡ ಜಿಲ್ಲೆಯಲ್ಲಿ ಹತ್ತಕ್ಕೂ ಹತ್ತು ಸ್ಥಾನವನ್ನು ಗೆಲುತ್ತೇವೆ. ಬಳ್ಳಾರಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಭದ್ರಕೋಟೆಯಾಗಿದೆ. ಆ ಕ್ಷೇತ್ರಗಳ ಮತದಾರರು, ಅಭಿಮಾನಿಗಳು ನಮ್ಮೊಂದಿಗೆ ಇದ್ದಾರೆ. ಹೀಗಾಗಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ಹಿನ್ನಡೆಯಾಗುವುದಿಲ್ಲ. ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷಕ್ಕೂ, ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಹೊಸ ಪಕ್ಷಗಳು ಅಷ್ಟು ಬೇಗ ಬೆಳವಣಿಗೆಯಾಗಿದ್ದು ಇತಿಹಾಸ ಇಲ್ಲ. ಬಳ್ಳಾರಿ ನಗರ ಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಅವರ ಪತ್ನಿ ಸ್ಪರ್ಧಿಸುವುದರಿಂದ ನನಗೆ ಯಾವುದೇ ತೊಂದರೆ ಇಲ್ಲ ಎಂದರು. ಇನ್ನು, ಸ್ವಾತಂತ್ರ್ಯ ಬಂದ ಬಳಿಕ ಪ್ರಥಮ ಬಾರಿಗೆ 13 ರಿಂದ 14 ಸಾವಿರ ಪಟ್ಟಾಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಿದ್ದೇನೆ. ಈ ಜನರ ಆಶೀರ್ವಾದದಿಂದ ನಾನು ಗೆಲ್ಲುತ್ತೇನೆ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಮಾ.25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ.. ಪ್ರಧಾನಿ ಮೋದಿ ಭಾಗಿ: ರವಿಕುಮಾರ್