ಇಂದು ಅಥವಾ ನಾಳೆಯೊಳಗೆ ಶಾಸಕ ವಿರೂಪಾಕ್ಷಪ್ಪ ಬಂಧನ, ರಕ್ಷಿಸುವ ಪ್ರಶ್ನೆಯೇ ಇಲ್ಲ: ಬಿಎಸ್​ ಯಡಿಯೂರಪ್ಪ - ವಿಜಯ ಸಂಕಲ್ಪ ಯಾತ್ರೆ

🎬 Watch Now: Feature Video

thumbnail

By

Published : Mar 6, 2023, 9:41 PM IST

ಕಲಬುರಗಿ: ಭ್ರಷ್ಟಾಚಾರ ಯಾರೇ ಮಾಡಿದ್ದರು ಅದು ಅಕ್ಷಮ್ಯ ಅಪರಾಧ. ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರಿಗೆ ನಮ್ಮ ಬೆಂಬಲವಿಲ್ಲ. ಅವರ ಮೇಲೆ ಏನು ಕಾನೂನು ಕ್ರಮಕೈಗೊಳ್ಳಬೇಕೋ ಅದನ್ನು ಕೈಗೊಳ್ಳಲಾಗುತ್ತೆ‌. ಅವರನ್ನು ಉಳಿಸುವ ಪ್ರಯತ್ನ ಮಾಡುವ ಮಾತಿಲ್ಲ. ಸಿದ್ದರಾಮಯ್ಯ ಅವರಿಗೆ ಬಾಯಿಗೆ ಬಂದಂತೆ ಮಾತನಾಡುವುದು ಅಭ್ಯಾಸವಿದೆ. ಇಂದು ಅಥವಾ ನಾಳೆ ವಿರೂಪಾಕ್ಷಪ್ಪ ಬಂಧನವಾಗುತ್ತೆ. ಎಲ್ಲ ರೀತಿ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಹೇಳಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಜಯ ಸಂಕಲ್ಪ ಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಬಿಎಸ್ ಯಡಿಯೂರಪ್ಪ ಆಗಮನಿಸಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು. ಕಾಂಗ್ರೆಸ್​ನಲ್ಲಿ ಕೆಲವರು ನಾನೇ ಮುಂದಿನ ಮುಖ್ಯಮಂತ್ರಿ ಎಂದು ಸ್ಪರ್ಧೆಗಿಳಿದಿದ್ದಾರೆ. ಅವರು ಕಾಣುತ್ತಿರುವ ಕನಸು ನನಸಾಗುವುದಿಲ್ಲ. ಜನ ಬಿಜೆಪಿ‌ ಹಾಗೂ ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ. ಮೊದಿಯವರಿಗೆ ಸರಿಸಮನಾಗಿ ಕಾಂಗ್ರೆಸ್​ನಲ್ಲಿ ಯಾವ ನಾಯಕರಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಸಮಲತಾ ಬಿಜೆಪಿಗೆ ಬರುವ ವಿಚಾರ ಗೊತ್ತಿಲ್ಲ. ಪಕ್ಷ ಸೇರುವವರ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಒಳ್ಳೆ ಸ್ಥಾನಮಾನ ಕೊಟ್ಟಿದೆ. ಕೆಆರ್​ ಪೇಟೆಯಲ್ಲಿ ನಾರಾಯಣಗೌಡ ಅವರನ್ನು ಗೆಲ್ಲಿಸಿಕೊಂಡು ಬಂದಿದ್ದೇವೆ. ಹೀಗಾಗಿ ಯಾರೂ ಪಕ್ಷ ಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದರು.

ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದೇನೆ. ಬಿಜೆಪಿ ನನಗೆ ಒಳ್ಳೆಯ ಸ್ಥಾನ ಮಾನ ನೀಡಿದೆ. ಬಿಎಸ್​ವೈ ಅವರಿಗೆ ಕೊಟ್ಟಂತಹ ಸ್ಥಾನಮಾನ ಗೌರವ ಯಾರಿಗೂ ಕೊಟ್ಟಿಲ್ಲ. ರಾಷ್ಟ್ರೀಯ ನಾಯಕರೊಂದಿಗೆ ಕುಳಿತುಕೊಳ್ಳುವಂತ ಅವಕಾಶ ನೀಡಿದ್ದಾರೆ. ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ‌ ನೀಡಿದ್ದೇನೆ. ನನಗೂ ವಯಸ್ಸಾಗಿದೆ. ಬೇರೆಯವರಿಗೆ ಅವಕಾಶ ಸಿಗಬೇಕು ಎಂದು ರಾಜೀನಾಮೆ ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಹೇಳಿದರು.

ಇದನ್ನೂ ಓದಿ: ಬಿಎಸ್​ವೈ ಹೆಲಿಕಾಪ್ಟರ್​​​ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ವಸ್ತುಗಳು.. ಸೇಫ್​​​ ಆಗಿ ಲ್ಯಾಂಡಿಂಗ್​!   

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.