Davanagere crime: ಬೈಕ್ನ ಸೈಡ್ ಬ್ಯಾಗ್ನಲ್ಲಿರಿಸಿದ್ದ ಹಣ ಎಗರಿಸಿದ ಬಾಲಕ : ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಸಿಸಿಟಿವಿಯಲ್ಲಿ ಸೆರೆ
🎬 Watch Now: Feature Video
ದಾವಣಗೆರೆ : ಬೈಕ್ನ ಸೈಡ್ ಬ್ಯಾಗ್ನಲ್ಲಿರಿಸಿದ್ದ 1,20,000ರೂ. ಹಣವನ್ನು ಬಾಲಕನೋರ್ವ ಎಗರಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹರಿಹರ ನಗರದ ಬ್ಯಾಂಕ್ ಆಫ್ ಬರೋಡಾ ಮುಂಭಾಗದಲ್ಲಿ ಘಟನೆ ನಡೆದಿದ್ದು, ಹಣ ಎಗರಿಸುವ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿಕ್ಷಕ ಚಂದ್ರಪ್ಪ ಎಂಬವರು ಹಣವನ್ನು ಕಳೆದುಕೊಂಡವರಾಗಿದ್ದಾರೆ.
ಚಂದ್ರಪ್ಪ ಅವರು ತಮ್ಮ ಸ್ನೇಹಿತ ಬ್ಯಾಂಕ್ ಖಾತೆಗೆ ಹಾಕಿದ್ದ ಹಣವನ್ನು ಬ್ಯಾಂಕ್‌ನಿಂದ ಬಿಡಿಸಿಕೊಂಡು ಹೊರಬಂದಿದ್ದರು. ಬಳಿಕ ಈ ಹಣವನ್ನು ತಮ್ಮ ಬೈಕ್ನ ಚೀಲದಲ್ಲಿರಿಸಿದ್ದಾರೆ. ನಂತರ ಅಲ್ಲಿಂದ ತೆರಳುವ ವೇಳೆ ಹಿಂಬಾಲಿಸಿಕೊಂಡು ಬಂದ ಬಾಲಕನೋರ್ವ ಅವರ ಗಮನ ಬೇರೆಡೆ ಸೆಳೆದು ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.
ನಂತರ ಶಿಕ್ಷಕ ಚಂದ್ರಪ್ಪ ಅವರು ಬ್ಯಾಗ್ ಪರಿಶೀಲಿಸಿದಾಗ ಹಣ ಎಗರಿಸಿರುವುದು ಬೆಳಕಿಗೆ ಬಂದಿದೆ. ಬಳಿಕ ತಡಮಾಡದೆ ನೇರವಾಗಿ ಬ್ಯಾಂಕ್ಗೆ ಬಂದಿದ್ದಾರೆ. ಇಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಹಣ ಎಗರಿಸಿರುವುದು ಕಂಡುಬಂದಿದೆ. ಈ ಸಂಬಂಧ ಹರಿಹರನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ : ಶಾರ್ಟ್ ಸರ್ಕ್ಯೂಟ್ನಿಂದ ಮಕ್ಕಳಿದ್ದ ಶಾಲಾ ವಾಹನಕ್ಕೆ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ