thumbnail

ಔರಾದ್​ನಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥ: ವಿಡಿಯೋ

By

Published : Jun 20, 2023, 10:39 PM IST

ಬೀದರ್: ಔರಾದ್ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಕೊಳವೆಬಾವಿ ಅವಲಂಬಿಸಿದ್ದು, ಈ ಕೊಳವೆಬಾವಿಗೆ ಚರಂಡಿ ನೀರು ಸೇರಿದ್ದರಿಂದ ಘಟನೆ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಅಧಿಕಾರಿಗಳ ತಂಡ ಗ್ರಾಮಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. 

ನೀರು ಕುಡಿದು ಹಲವಾರು ಜನರು ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ತಕ್ಷಣ ಎಲ್ಲ ಅಸ್ವಸ್ಥರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಒಂದು ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಹಳ್ಳಿಯಲ್ಲಿಯೇ ಟಿಕಾಣಿ ಹೂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. 

ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಘಟನೆ ಶನಿವಾರವೇ ಘಟನೆ ಬೆಳಕಿಗೆ ಬಂದಿದೆ. ಆದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಪರಿಣಾಮ ಅಸ್ವಸ್ಥರ ಸಂಖ್ಯೆ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ವಿಷಯ ತಿಳಿದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಒಇ ಶಿಲ್ಪ ಎಂ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಔರಾದ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಸ್ಥಿತಿಗತಿ ವಿಚಾರಿಸಿದ್ದಾರೆ. ನೀರು ಕಲುಷಿತಗೊಳ್ಳಲು ಕಾರಣರಾದವರ ಮೇಲೆ ಕಾನೂನು ಕ್ರಮಕೈಗೊಳ್ಳುವ ಭರವಸೆಯನ್ನು ಅಧಿಕಾರಿಗಳು ನೀಡಿದರು.

ಇದನ್ನೂ ಓದಿ: ಶಾಲೆಗೆ ಹೋಗಲು ಜೆಸಿಬಿ ಏರಿದ ವಿದ್ಯಾರ್ಥಿಗಳು- ವಿಡಿಯೋ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.