ಕನ್ನಡ ಚಿತ್ರರಂಗದ 50ಕ್ಕೂ ಹೆಚ್ಚು ಕಲಾವಿದರಿಂದ ಡಾ.ಲೀಲಾವತಿಗೆ ಸನ್ಮಾನ: ನಮ್ಮಮ್ಮ ಲೀಲಮ್ಮ ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ಪ್ರದಾನ - ಲೀಲಾವತಿ ಅವರ ಮಗ ವಿನೋದ್ ರಾಜ್
🎬 Watch Now: Feature Video
ನೆಲಮಂಗಲ: ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ. ಎಂ ಲೀಲಾವತಿ ಅವರ ಮನೆಗೆ ಭೇಟಿ ನೀಡಿದ ಚಿತ್ರರಂಗದ ಕಲಾವಿದರು ಅವರನ್ನು ಸನ್ಮಾನಿಸುವ ಮೂಲಕ ನಮ್ಮಮ್ಮ ಲೀಲಮ್ಮ ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ಪ್ರದಾನ ಮಾಡಿದರು. ಕನ್ನಡ ಚಿತ್ರೋದ್ಯಮ ಮಹಿಳಾ ದಿನದ ಅಂಗವಾಗಿ ಕಲಾವಿದರ ಬಳಗದಿಂದ ಡಾ.ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಆದರೆ ವಯೋಸಹಜ ಕಾಯಿಲೆ ಮತ್ತು ವಯಸ್ಸಿನ ಹಿನ್ನೆಲೆಯಿಂದ ಕಾರ್ಯಕ್ರಮಕ್ಕೆ ಬರಲು ಅಸಾಧ್ಯವಾಗಿದ್ದ ಕಾರಣ, ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕಲಾವಿದರು ಸನ್ಮಾನ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ತಾರಬಳಗವೇ ಲೀಲಾವತಿಯವರ ಮನೆಗೆ ಬಂದಿದ್ದರು. ಹಿರಿಯ ನಟ ದೊಡ್ಡಣ್ಣ, ಸುಂದರ್ ರಾಜ್, ಶ್ರೀಧರ್, ಜೈಜಗದೀಶ್, ನಿರ್ದೇಶಕ ಸಾಯಿಪ್ರಕಾಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ನಟಿ ಪೂಜಾಗಾಂಧಿ, ಪದ್ಮವಾಸಂತಿ, ಗಿರಿಜಾ ಲೋಕೇಶ್ ಸೇರಿದಂತೆ 50ಕ್ಕೂ ಹೆಚ್ಚು ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ನಟ ನಟಿಯರು ಲೀಲಾವತಿಯರೊಂದಿಗೆ ಇದ್ದ ಒಡನಾಟವನ್ನು ಹಂಚಿಕೊಂಡರು. ನಟ ನಟಿಯರನ್ನು ಬರಮಾಡಿಕೊಂಡ ಲೀಲಾವತಿ ಅವರ ಮಗ ವಿನೋದ್ ರಾಜ್ ಕಲಾವಿದರಿಗೆ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಿದರು.
ಇದನ್ನೂ ಓದಿ: ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ.. ವಿಶೇಷ ಪೂಜೆ