ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ: ಸಂಪೂರ್ಣ ಸುಟ್ಟು ಕರಕಲಾದ ಟ್ರಕ್ - ETV Bharat kannada News
🎬 Watch Now: Feature Video
ತುಮಕೂರು :ಚಲಿಸುತ್ತಿದ್ದ ಟ್ರಕ್ನಲ್ಲಿ ತಾಂತ್ರಿಕ ದೋಷದಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಹೊತ್ತಿ ಊರಿದಿರೋ ಘಟನೆ ತುಮಕೂರು ಜಿಲ್ಲೆಯ ಶಿರಾ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಶಿರಾ ತಾಲೂಕಿನ ಕಡವಿಗೆರೆ ಮೇಲು ಸೇತುವೆಯ ಬಳಿ ಅವಘಡ ಸಂಭವಿಸಿದ್ದು, ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಟ್ರಕ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕ್ಷಣಾರ್ಧದಲ್ಲೇ ಟ್ರಕ್ ತುಂಬೆಲ್ಲ ಆವರಿಸಿದೆ.
ಇದರಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ನಂತರ ಸ್ಥಳಕ್ಕೆ ಬಂದಾಗ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನು ಈ ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದ ಕ್ಲೀನರ್ ಹಾಗೂ ಆತನ ಪ್ರಾಣ ಉಳಿದಿದೆ. ಇನ್ನು ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಟ್ರಕ್ನ ಇಂಜಿನ್ನಲ್ಲಿ ಉಷ್ಣಾಂಶ ಹೆಚ್ಚಾಗಿದ್ದ ಕಾರಣ ಈ ರೀತಿ ಬೆಂಕಿ ಹೊತ್ತು ಕೊಂಡಿದೆ ಎಂದು ಪ್ರಾಥಮಿಕ ಮೂಲಗಳು ಸ್ಪಷ್ಟಪಡಿಸಿವೆ. ಅಲ್ಲದೇ ಬೆಂಕಿ ಒತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದರೆ ಟ್ರಕ್ನಲ್ಲಿದ್ದ ಸಾಮಗ್ರಿಗಳನ್ನು ಉಳಿಸಬಹುದಾಗಿತ್ತು. ಆದರೆ, ಹೆದ್ದಾರಿಯ ಸಮೀಪ ಅಗ್ನಿಶಾಮಕ ದಳ ಇಲ್ಲದೇ ಇರುವುದು ಕೂಡ ಈ ರೀತಿ ಅವಘಡದಲ್ಲಿ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಹೆಚ್ಚು ನಷ್ಟ ಸಂಭವಿಸುತ್ತಿರುವುದು ಕಾರಣವಾಗಿದೆ ಎನ್ನುವುದು ಸ್ಥಳೀಯರ ಮಾತಾಗಿದೆ. ಈ ಹೆದ್ದಾರಿಯಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುತ್ತವೆ. ಈ ವೇಳೆ, ತಕ್ಷಣ ವೈದ್ಯಕೀಯ ತುರ್ತು ಚಿಕಿತ್ಸಾ ವ್ಯವಸ್ಥೆ ಕೂಡ ಇಲ್ಲದಿರುವುದು ಇಲ್ಲಿನ ವ್ಯವಸ್ಥೆಗೆ ಸಾಕ್ಷಿಯಾಗಿದೆ.
ಇದನ್ನೂ ಓದಿ :ಮದ್ಯದ ಅಮಲಿನಲ್ಲಿ ಆಸ್ಪತ್ರೆಯಲ್ಲಿ ಮಲಗಿದ್ರಾ ಸರ್ಕಾರಿ ವೈದ್ಯ? ವಿಡಿಯೋ