ಉಜ್ಜಯಿನಿ ಮಹಾಕಾಲೇಶ್ವರ ದೇವಾಲಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ - ಮಹಾಕಾಲೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಯಡಿಯೂರಪ್ಪ
🎬 Watch Now: Feature Video


Published : Sep 11, 2023, 3:52 PM IST
ಉಜ್ಜಯಿನಿ( ಮಧ್ಯಪ್ರದೇಶ) : ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಪ್ರಮುಖ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜಯಿನಿ ಮಹಾಕಾಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವರಿಗೆ ವಿಶೇಷ ಪೂಜೆ ಮತ್ತು ಅಭಿಷೇಕ ನೆರವೇರಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಪ್ರಗತಿ ಮತ್ತು ಸಮೃದ್ಧಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ ಎಂದು ಹೇಳಿದರು. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಸಭೆಯನ್ನು ಕುರಿತು ಮಾತನಾಡಿ, ಇಂದು ಇಡೀ ಜಗತ್ತೇ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ಕೊಂಡಾಡುತ್ತಿದೆ. ಜಿ-20 ಸಭೆಗೆ ವಿಶ್ವದೆಲ್ಲೆಡೆಯಿಂದ ಪ್ರಮುಖ ನಾಯಕರು ಆಗಮಿಸಿದ್ದರು. ಅವರು ಪ್ರಧಾನಿ ಮೋದಿಯವರ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಪರವಾಗಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇಂದು ಬೆಳಗ್ಗೆಯಿಂದ ಉಜ್ಜಯಿನಿ ಮಹಾಕಾಲೇಶ್ವರ ದೇವಾಲಯಕ್ಕೆ ಗಣ್ಯಾತಿಗಣ್ಯರು ಆಗಮಿಸಿದ್ದು, ಯಡಿಯೂರಪ್ಪ ಅವರಿಗಿಂತ ಮೊದಲು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಮತ್ತು ಭಸ್ಮಾರತಿಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ :ಬೆಂಗಳೂರು: ಬ್ರಿಟನ್ ಪ್ರಧಾನಿ ತಾಯಿ ಉಷಾ ಸುನಕ್ ರಿಂದ ಕೃಷ್ಣ ಜನ್ಮಾಷ್ಟಮಿ ಸಾಂಪ್ರದಾಯಿಕ ಪೂಜೆ..