'ಪಕ್ಷದಿಂದ ಹೊರಬರಬೇಕೆಂದಿದ್ದೆ, ಒಮ್ಮೊಮ್ಮೆ ಗುಲಾಮಿತನ ಅನ್ನಿಸಿಬಿಡುತ್ತದೆ': ಬಿಜೆಪಿ ಸಂಸದ ಸಂಗಣ್ಣ ಕರಡಿ
🎬 Watch Now: Feature Video
ಕೊಪ್ಪಳ: ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಮ್ಮವರೇ ಸರಿಯಾಗಿ ಕೆಲಸ ಮಾಡಲಿಲ್ಲ. ಹೀಗಾಗಿ ಪಕ್ಷದಿಂದ ಹೊರಬರಬೇಕೆಂದಿದ್ದೆ ಎಂದು ತಮ್ಮ ಸ್ವಪಕ್ಷದ ಬಗ್ಗೆ ಸಂಸದ ಸಂಗಣ್ಣ ಕರಡಿ ಅಸಮಾಧಾನ ಹೊರಹಾಕಿದ್ದು, ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ.
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲ, ಸಚಿವ ಗೋವಿಂದ ಕಾರಜೋಳ ಅವರಿದ್ದಾಗಲೂ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿಸಲು ಆಗಲಿಲ್ಲ ಎಂದು ಹಿಂದಿನ ಸರಕಾರ ಹಾಗೂ ಸಚಿವರ ವಿರುದ್ದ ತೀವ್ರ ಅಸಮಾಧಾನ ಹೊರಹಾಕಿದರು.
ನಾನು ಅಂದು ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಹೊರ ಬರಬೇಕೆಂದಿದ್ದೆ. ಆದರೆ ಪಕ್ಷದ ಚೌಕಟ್ಟಿನಲ್ಲಿ ಇರಬೇಕಿದ್ದರಿಂದ ಅಲ್ಲೇ ಇದ್ದೆ. ಒಮ್ಮೊಮ್ಮೆ ಗುಲಾಮಿತನ ಎಂದು ಅನ್ನಿಸಿ ಬಿಡುತ್ತದೆ. ನಮ್ಮ ಜಿಲ್ಲೆಯಲ್ಲಿ ನನ್ನನ್ನೂ ಸೇರಿದಂತೆ ಒಬ್ಬರು ಡೈನಾಮಿಕ್ ಲೀಡರ್ ಇಲ್ಲದೇ ಇರುವುದು ಜಿಲ್ಲೆಯ ಅಭಿವೃದ್ದಿಗೆ ಹಿನ್ನಡೆ ಆಗಲು ಕಾರಣ ಎಂದು ಹೇಳಿದರು.
ಇದನ್ನೂ ಓದಿ: ದತ್ತಮಾಲಾ ಅಭಿಯಾನ: ಚಿಕ್ಕಮಗಳೂರಲ್ಲಿ ಮಾಲಾಧಾರಿಗಳಿಂದ ಭಿಕ್ಷಾಟನೆ, ಬಿಗಿ ಪೊಲೀಸ್ ಭದ್ರತೆ