ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ಊರ್ಮಿಳಾ ಮಾತೋಂಡ್ಕರ್ - ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

🎬 Watch Now: Feature Video

thumbnail

By

Published : Jan 24, 2023, 1:53 PM IST

Updated : Feb 3, 2023, 8:39 PM IST

ಶ್ರೀನಗರ(ಜಮ್ಮು ಕಾಶ್ಮೀರ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ಇದೀಗ ಅಂತಿಮ ಹಂತಕ್ಕೆ ಬಂದಿದೆ. ಇಂದು ಯಾತ್ರೆಯ 130ನೇ ದಿನ. ಜಮ್ಮು ಕಾಶ್ಮೀರದ ನಗ್ರೋಟಾದಿಂದ ಯಾತ್ರೆ ಆರಂಭಗೊಂಡಿದ್ದು, ಉಧಂಪುರಕ್ಕೆ ಸಾಗಲಿದೆ. ಈ ವೇಳೆ, ನಟಿ ಊರ್ಮಿಳಾ ಮಾತೋಂಡ್ಕರ್ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿಯವರೊಂದಿಗೆ ಹೆಜ್ಜೆ ಹಾಕಿದರು. 

7 ಸೆಪ್ಟೆಂಬರ್ 2022 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಗೆ ಕೇವಲ 6 ದಿನಗಳು ಮಾತ್ರ ಉಳಿದಿವೆ. ಯಾತ್ರೆಗೆ ಜನರಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಪಾದಯಾತ್ರೆ ಮೂಲಕ ರಾಹುಲ್​​ ಗಾಂಧಿ ದೇಶಾದ್ಯಂತ ವಿಭಿನ್ನ ಸಂದೇಶ ರವಾನಿಸಲು ಪ್ರಯತ್ನಿಸುತ್ತಿದ್ದಾರೆ. "ಭಾರತ್ ಜೋಡೋ ಯಾತ್ರೆಯನ್ನು ತಪಸ್ಸು ಎಂದು ಬಣ್ಣಿಸಿದ ರಾಹುಲ್ ಗಾಂಧಿ ಜನರೊಂದಿಗೆ ಸಂಪರ್ಕ ಸಾಧಿಸುವುದು ಮತ್ತು ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವುದು ನನ್ನ ಗುರಿಯಾಗಿದೆ. ಈ ಪ್ರಯಾಣದ ಮೂಲಕ ಈ ಗುರಿಯನ್ನು ಈಡೇರಿಸಲಾಗುತ್ತಿದೆ" ಎಂದು ಹೇಳಿಕೊಂಡಿದ್ದಾರೆ.

ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಜನವರಿ 30 ರಂದು ಜಮ್ಮು- ಕಾಶ್ಮೀರದಲ್ಲಿ ಸಮಾಪ್ತಿಗೊಳ್ಳಲಿದೆ. ಸೆಪ್ಟೆಂಬರ್ 7ರಂದು ಆರಂಭವಾಗಿದ್ದ ಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ 11 ರಾಜ್ಯಗಳಲ್ಲಿ ಸಂಚರಿಸಿದೆ. 

Last Updated : Feb 3, 2023, 8:39 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.