ಮೈಸೂರು ದಸರಾ: ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಗರುಡ ಉತ್ಸವ - ವಿಡಿಯೋ - ಚಾಮುಂಡಿ ಬೆಟ್ಟದಲ್ಲಿ ಗರುಡ ಉತ್ಸವ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/18-10-2023/640-480-19797745-thumbnail-16x9-mh34.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Oct 18, 2023, 3:19 PM IST
|Updated : Oct 18, 2023, 5:30 PM IST
ಮೈಸೂರು: ನವರಾತ್ರಿಯ 4ನೇ ದಿನವಾದ ಬುಧವಾರದಂದು ಚಾಮುಂಡಿ ಬೆಟ್ಟದಲ್ಲಿ ದೇವಿಯ ಮೂಲ ಉತ್ಸವ ಮೂರ್ತಿಗೆ ಗರುಡ ಉತ್ಸವ ವಿಜೃಂಭಣೆಯಿಂದ ಜರುಗಿತು. ಈ ಉತ್ಸವದಲ್ಲಿ ಭಕ್ತರು ಭಾಗವಹಿಸಿ ತಾಯಿಯ ಅನುಗ್ರಹಕ್ಕೆ ಪಾತ್ರರಾದರು.
ಈಗಾಗಲೇ ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನವರಾತ್ರಿಯ ಸಾಂಪ್ರದಾಯಿಕ ಪೂಜೆಗಳು ನಡೆಯುತ್ತಿದ್ದು, ಮೂಲ ಚಾಮುಂಡೇಶ್ವರಿಗೆ ಇಂದು ವೈಷ್ಣವಿ ಅಲಂಕಾರವನ್ನು ಮಾಡಲಾಗಿತ್ತು. ಇದರ ಜೊತೆಗೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ಆರಂಭವಾಗಿತ್ತು. ಬಳಿಕ ಮೂಲ ಮೂರ್ತಿಗೆ ಮಹಾ ಮಂಗಳಾರತಿ ಬೆಳಗಿ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರಗೆ ತಂದು ಗರುಡ ಉತ್ಸವ ನೆರವೇರಿಸಲಾಯಿತು. ಇನ್ನೊಂದೆಡೆ ದಸರಾ ಕಾರ್ಯಕ್ರಮಗಳ ಸಿದ್ದತೆಗಳು ಕೂಡ ಬರದಿಂದ ಸಾಗಿವೆ.
ನವರಾತ್ರಿಯ ನಾಲ್ಕನೇ ದಿನ ದೇವಿಯ ಕೂಷ್ಮಾಂಡಾ ಸ್ವರೂಪವನ್ನು ಪೂಜಿಸಲಾಗುತ್ತದೆ. ಸೃಷ್ಟಿಯಲ್ಲಿ ಎಲ್ಲೆಡೆ ಅಂಧಕಾರವಿದ್ದ ಸಮಯದಲ್ಲಿ ತನ್ನ ಮಂದಹಾಸದಿಂದ ಬ್ರಹ್ಮಾಂಡವನ್ನು ರಚಿಸಿರುತ್ತಾಳೆ ಎಂದು ಹೇಳಲಾಗುತ್ತದೆ. ಹಾಗಾಗಿ ದೇವಿ ಈ ಸ್ವರೂಪವನ್ನು ಕೂಷ್ಮಾಂಡಾ ಎಂದು ಕರೆಯಲಾಗುತ್ತದೆ.
ಇದನ್ನೂ ಓದಿ : ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲರು: ವಿಡಿಯೋ