ಪ್ರವಾಸಕ್ಕೆ ತೆರಳಿದ್ದ ಮೂರು ಕುಟುಂಬಗಳ ಬದುಕಿನ ಪಯಣ ಅಂತ್ಯ: ಮೈಸೂರು ಭೀಕರ ಅಪಘಾತದ ಕೊನೆ ಕ್ಷಣದ ವಿಡಿಯೋ! - ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ
🎬 Watch Now: Feature Video
ಮೈಸೂರು/ಬಳ್ಳಾರಿ: ಮೈಸೂರಿನ ಕೊಳ್ಳೇಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ಖಾಸಗಿ ಬಸ್ ಮತ್ತು ಇನ್ನೋವಾ ಕಾರ್ ನಡುವಿನ ಭೀಕರ ಅಪಘಾತಕ್ಕೆ 10 ಜನ ಬಲಿಯಾಗಿದ್ದಾರೆ. ಮೃತಪಟ್ಟವರಲ್ಲಿ ಕಾರು ಚಾಲಕ ಸೇರಿ ಮೂರು ಕುಟುಂಬಗಳ 9 ಜನ ಸದಸ್ಯರಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಗನಕಲ್ ಗ್ರಾಮದಿಂದ ಮೇ 27 ರಂದು ಮೂರು ಕುಟುಂಬಗಳ 12 ಸದಸ್ಯರು ರೈಲಿನಲ್ಲಿ ಮೈಸೂರಿಗೆ ಪ್ರವಾಸಕ್ಕೆ ಎಂದು ತೆರಳಿದ್ದರು. ಇಂದು ಪ್ರವಾಸ ಮುಗಿಸಿ ಬಾಡಿಗೆ ಕಾರಿನಲ್ಲಿ ಮೈಸೂರು ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ದುರಂತದ ಭೀಕರ ದೃಶ್ಯ ಬಸ್ನಲ್ಲಿದ್ದ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೃತಪಟ್ಟವರಲ್ಲಿ ಸಂದೀಪ್ (24), ಅವರ ತಂದೆ ಕೊಟ್ರೇಶ್(45), ತಾಯಿ ಸುಜಾತಾ (40) ಒಂದು ಕುಟುಂಬದವರಾಗಿದ್ದರೆ, ಇನ್ನೊಂದು ಕುಟುಂಬದ ಮಂಜುನಾಥ (35), ಪತ್ನಿ ಪೂರ್ಣಿಮಾ(30), ಮಕ್ಕಳಾದ ಕಾರ್ತಿಕ್ (08), ಪವನ್ (10) ಸಾವನ್ನಪ್ಪಿದ್ದಾರೆ. ಇನ್ನು ಮತ್ತೊಂದು ಕುಟುಂಬದ ಗಾಯತ್ರಿ(35), ಮಗಳು ಶ್ರಾವ್ಯ(3) ಮೃತಪಟ್ಟವರು, ಕಾರು ಚಾಲಕ ಆದಿತ್ಯ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಜನಾರ್ದನ, ಅವರ ಮಗ ಪುನೀತ್ ಮತ್ತು ಶಶಿಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮೈಸೂರು ಎಸ್ಪಿ ಮತ್ತು ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಅಪಘಾತ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಸಂಗನಕಲ್ ಗ್ರಾಮದಲ್ಲಿ ಮುಗಿಲು ಮುಟ್ಟಿದ ಆಕ್ರಂದನ: ದುರಂತದ ಸುದ್ದಿ ಬಳಿಕ ಸಂಗನಕಲ್ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ. ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ.
ಇದನ್ನೂ ಓದಿ: ಮೈಸೂರು: ಖಾಸಗಿ ಬಸ್ ಮತ್ತು ಇನ್ನೋವಾ ಕಾರ್ ನಡುವೆ ಭೀಕರ ಅಪಘಾತ.. 10 ಮಂದಿ ಸಾವು, ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ