ಚಿಕ್ಕಮಗಳೂರಿನಲ್ಲಿ ನಾಗರ ಪಂಚಮಿ ಸಂಭ್ರಮ: ಸುಬ್ರಮಣ್ಯೇಶ್ವರ ದೇಗುಲದಲ್ಲಿ ವಿಶೇಷ ಪೂಜೆ - ಈಟಿವಿ ಭಾರತ್​ ಕನ್ನಡ ನ್ಯೂಸ್

🎬 Watch Now: Feature Video

thumbnail

By ETV Bharat Karnataka Team

Published : Aug 21, 2023, 10:22 PM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು ಸಂಭ್ರಮ- ಸಡಗರದಿಂದ ನಾಗರ ಪಂಚಮಿ ಹಬ್ಬ ಆಚರಣೆ ಮಾಡಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಷ್ಟೇ ಖ್ಯಾತಿ ಗಳಿಸಿರುವ ಕಳಸ ತಾಲೂಕಿನ ಹಳ್ಳುವಳ್ಳಿಯ ಸುಬ್ರಮಣ್ಯೇಶ್ವರ ದೇವಸ್ಥಾನಕ್ಕೆ ವಿಶೇಷ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ನಾಗ ದೇವರಿಗೆ ಹಾಲಿನ ಅಭಿಷೇಕ ಮಾಡಿ ಪ್ರಾರ್ಥನೆ ಸಲ್ಲಿಸಿದರು.

ತಾಲೂಕಿನ ಸುತ್ತಮುತ್ತಲಿನ ಕುದುರೆಮುಖ, ಸಂಸೆ, ಹೊರನಾಡು, ಹಿರೇಬೈಲ್, ಮರಸನಿಗೆ, ಬಾಳೆಹೊಳೆ, ಕಾರ್ಗದ್ದೆ, ಕಳಗೋಡು, ಕಾರ್ಲೆ, ಬಲಿಗೆ, ಬಸರಿಕಟ್ಟೆ ಸೇರಿದಂತೆ ವಿವಿಧ ಭಾಗಗಳಿಂದ ಗ್ರಾಮಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ ತಮ್ಮ ಭಕ್ತಿ ಸಮರ್ಪಣೆ ಮಾಡಿದರು. ಭದ್ರಾ ನದಿ ತಟದಲ್ಲಿರುವ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಶ್ರದ್ಧಾ ಭಕ್ತಿಯಿಂದ ನಡೆದುಕೊಂಡರೆ ಜೀವನದ ಎಲ್ಲಾ ಸಮಸ್ಯೆಗಳೂ ಬಗೆಹರಿಯುತ್ತವೆ ಎಂಬುದು ಭಕ್ತರ ನಂಬಿಕೆ. ವಿಶೇಷವಾಗಿ ಆರೋಗ್ಯದ ಸಮಸ್ಯೆ, ಮಕ್ಕಳಿಗೆ ಶಿಕ್ಷಣ ಸಮಸ್ಯೆ ಹಾಗೂ ಕೌಟುಂಬಿಕ ಕಲಹದಂತಹ ಸಮಸ್ಯೆಗಳು ಬಗೆಹರಿಯುತ್ತವೆ ಎಂಬುದು ಭಕ್ತರ ನಂಬಿಕೆ. 

ಇದನ್ನೂ ಓದಿ : ಧಾರವಾಡ: ಶಾಲಾ ಮಕ್ಕಳಿಂದ ನಾಗರ ಪಂಚಮಿ ಆಚರಣೆ.. ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.