ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ 'ಲಕ್ಷ್ಯ ಪ್ರಶಸ್ತಿ'ಗೆ ಭಾಜನ - ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ ಶಿವಪ್ರಸಾದ್
🎬 Watch Now: Feature Video
ಮೈಸೂರು: ಸಾಮಾನ್ಯವಾಗಿ ಸರ್ಕಾರಿ ಜಿಲ್ಲಾಸ್ಪತ್ರೆಗಳು ಅಂದರೆ ಸಾಕು ಅಲ್ಲೇನೂ ಸರಿಯಾಗಿ ಸೌಲಭ್ಯ ಸಿಗದೇ ಸಾವು ನೋವೇ ಜಾಸ್ತಿ ಅನ್ನೋ ಮಾತು ಕೇಳಿ ಬರುತ್ತವೆ. ಆದರೆ, ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹೆರಿಗೆ ಹಾಗೂ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ತಾಯಿ ಹಾಗೂ ಶಿಶು ಮರಣ ಕಡಿಮೆಗೊಳಿಸುವಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿದ ಪರಿಣಾಮ ರಾಷ್ಟ್ರಮಟ್ಟದ ಲಕ್ಷ್ಯ ಪ್ರಶಸ್ತಿಗೆ ಭಾಜನವಾಗಿ ಗಮನ ಸೆಳೆದಿದೆ.
ಹೌದು, ಸರ್ಕಾರದ ಉತ್ತಮ ಯೋಜನೆಯಾದ ಲಕ್ಷ್ಯ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ನಂಜನಗೂಡು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶ್ರಮಿಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ನುರಿತ ತಜ್ಞರ ಸಮಿತಿ ತಂಡವು ತಾಲೂಕು ಮಟ್ಟದ ಆಸ್ಪತ್ರೆಗೆ ಭೇಟಿ ನೀಡಿ, ಕೂಲಂಕಷವಾಗಿ ಪರಿಶೀಲನೆ ನಡೆಸಿದ ನಂತರ ತಂಡ ಒದಗಿಸಿದ ವರದಿಯ ಅನ್ವಯ ರಾಷ್ಟ್ರೀಯ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತವಾಗಿ ಪ್ರಶಸ್ತಿ ಘೋಷಿಸಿದೆ.
ರಾಷ್ಟ್ರೀಯ ಮಟ್ಟದಲ್ಲಿ ಗುಣಾತ್ಮಕ ಸೇವೆ ಮತ್ತು ಉತ್ತಮ ಗುಣಮಟ್ಟದ ಹೆರಿಗೆ ಸೌಲಭ್ಯ ಹಾಗೂ ಶಾಸ್ತ್ರ ಚಿಕಿತ್ಸೆ ವಿಧಾನ, ಸ್ವಚ್ಛತೆ, ಮೂಲ ಸೌಕರ್ಯ ಎಲ್ಲವನ್ನು ಒದಗಿಸಲಾಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಪ್ರಾಮಾಣಿಕ ಪ್ರಯತ್ನ ಹಾಗೂ ಸಾರ್ವಜನಿಕರ ಸಹಕಾರದಿಂದ ಇಂದು ಪ್ರಶಸ್ತಿಗೆ ಭಾಜನರಾಗಿರುವುದು ಸಂತಸ ತಂದಿದೆ ಎಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ ಶಿವಪ್ರಸಾದ್ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: 'ಲಕ್ಷ್ಯ' ಭೇದಿಸುವ ಗುರಿ: ದೊಡ್ಡ ದೊಡ್ಡ ಹಾಸ್ಪಿಟಲ್ಗಳೊಂದಿಗೆ ಗಂಗಾವತಿ ಸರ್ಕಾರಿ ಆಸ್ಪತ್ರೆ ಪೈಪೋಟಿ