ಹುಬ್ಬಳ್ಳಿಯಲ್ಲಿ ಕೂದಲೆಳೆಯ ಅಂತರದಲ್ಲಿ ತಪ್ಪಿದ ದುರಂತ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ - narrow escape
🎬 Watch Now: Feature Video
ಹುಬ್ಬಳ್ಳಿ: ನಗರದಲ್ಲಿ ಇಂದು ಸಂಭವಿಸಲಿದ್ದ ದೊಡ್ಡ ಅಪಘಾತವೊಂದು ಕೂದಲು ಎಳೆಯ ಅಂತರದಲ್ಲಿ ತಪ್ಪಿದೆ. ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಬೃಹತ್ ಗಾತ್ರದ ಕಬ್ಬಿಣದ ಕಂಬ ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬ್ರಿಡ್ಜ್ ಬಳಿ ಬೃಹತ್ ವಾಹನಗಳ ಪ್ರವೇಶ ನಿರ್ಬಂಧಿಸುವ ದೃಷ್ಟಿಯಿಂದ ಹಾಕಲಾಗಿದ್ದ ಕಬ್ಬಿಣದ ಬೃಹತ್ ಕಂಬ, ತುಕ್ಕು ಹಿಡಿದು ತನ್ನಷ್ಟಕ್ಕೆ ತಾನೇ ನೆಲಕ್ಕುರುಳಿದ್ದು, ಕೂದಲೆಳೆಯ ಅಂತರದಲ್ಲಿ ಬಹುದೊಡ್ಡ ದುರಂತ ತಪ್ಪಿದಂತಾಗಿದೆ. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಈ ರೀತಿಯ ದುರ್ಘಟನೆ ನಡೆದಿತ್ತು. ಆದರೂ ರೈಲ್ವೆ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿರುವುದು ಇಂತಹದೊಂದು ಘಟನೆಗೆ ಕಾರಣವಾಗಿದೆ ಎಂಬ ಮಾತುಗಳು ಸ್ಥಳೀಯರಿಂದ ಕೇಳಿಬಂದಿವೆ.
ಜನತೆ, ಬಸ್, ಕಾರು, ದ್ವಿಚಕ್ರ ವಾಹನಗಳು ಹಾದು ಹೋದ ಕೆಲವೇ ಕ್ಷಣಗಳಲ್ಲಿ ಕಂಬ ಉರುಳಿಬಿದ್ದಿದ್ದು, ಬಸ್ ಅಥವಾ ಕಾರ್ಗಳ ಮೇಲೆ ಬಿದ್ದಿದ್ದರೆ ದೊಡ್ಡ ಅನಾಹುತ ನಡೆಯುತ್ತಿತ್ತು. ಅತ್ಯಂತ ಜನದಟ್ಟಣೆಯ ಪ್ರದೇಶ ಹಾಗೂ ಹುಬ್ಬಳ್ಳಿ-ಗದಗ ಎನ್‌ಎಚ್-63 ರಸ್ತೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದ ಬಹುದೊಡ್ಡ ಘಟನೆ ಇದಾಗಿದೆ.
ಇದನ್ನೂ ಓದಿ: ಕರ್ತವ್ಯ ಲೋಪ ಆರೋಪದಡಿ ಅಶೋಕನಗರ ಠಾಣೆಯ ಇನ್ಸ್ಪೆಕ್ಟರ್ ಅಮಾನತು