ಕೈ ತಪ್ಪಿದ ಬಿಜೆಪಿ ಟಿಕೆಟ್: ಬೆಂಬಲಿಗರೆದುರು ನೇಮಿರಾಜ ನಾಯ್ಕ ಕಣ್ಣೀರು - etv bharat kannada
🎬 Watch Now: Feature Video

ವಿಜಯನಗರ: ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ನೇಮಿರಾಜ ನಾಯ್ಕ ದಂಪತಿ ಬೆಂಬಲಿಗರೆದುರು ಬಿಕ್ಕಿ,ಬಿಕ್ಕಿ ಅತ್ತ ಪ್ರಸಂಗ ನಡೆಯಿತು. ನಿನ್ನೆ (ಸೋಮವಾರ) ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿದ್ದ ನೇಮಿರಾಜ ನಾಯ್ಕ ನಾಮಪತ್ರ ಸಲ್ಲಿಸಿದ್ದರು. ಆದರೆ ಸಂಜೆ ಬಿಡುಗಡೆಯಾದ ಬಿಜೆಪಿಯ 3ನೇ ಪಟ್ಟಿಯಲ್ಲಿ ಬಿ.ರಾಮಣ್ಣ ಎಂಬುವರಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.
ಇದರ ಬೆನ್ನಲ್ಲೇ ನೇಮಿರಾಜ ನಾಯ್ಕ ಹಗರಿಬೊಮ್ಮನಹಳ್ಳಿಯ ಮನೆ ಬಳಿ ಜಮಾಯಿಸಿದ ಸಾವಿರಾರು ಬೆಂಬಲಿಗರೆದುರು ಬೇಸರ ವ್ಯಕ್ತಪಡಿಸಿದರು. ಬೆಂಬಲಿಗರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೇಮಿರಾಜ ನಾಯ್ಕ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಕುರಿತು ಬೆಳಗಿನವರೆಗೂ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಬಿಜೆಪಿ ಟಿಕೆಟ್ಗಾಗಿ ಪ್ರಬಲ ಪೈಪೋಟಿ ನಡೆಸಿದ್ದ ನಾಯ್ಕ್ ಬದಲಿಗೆ ಬಲ್ಲಾಹುಣ್ಸಿ ರಾಮಣ್ಣಗೆ ಟಿಕೆಟ್ ಘೋಷಣೆ ಮಾಡಿದ್ದು, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಆದ್ರೆ ಅವರು ಈವರೆಗೂ ತಮ್ಮ ನಿರ್ಧಾರ ಪ್ರಕಟಿಸಿಲ್ಲ. ಇನ್ನೊಂದೆಡೆ, ವಿವಿಧ ಪಕ್ಷಗಳಲ್ಲೂ ಟಿಕೆಟ್ ವಂಚಿತರು ಬಂಡಾಯದ ಬಾವುಟ ಹಾರಿಸುತ್ತಿದ್ದಾರೆ.
ಇದನ್ನೂ ಓದಿ:ತುಮಕೂರು ನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ: ಸೊಗಡು ಶಿವಣ್ಣ ಘೋಷಣೆ