ಸಿದ್ದು ಪ್ರತಿಜ್ಞಾವಿಧಿ ಓದುತ್ತಿದ್ದಂತೆ ವಿಧಾನಸೌಧದಲ್ಲಿ ನೂತನ ಸಿಎಂ ನಾಮಫಲಕ ಅಳವಡಿಕೆ - ಬಸವರಾಜ ಬೊಮ್ಮಾಐಇ ನಾಮಫಲಕ
🎬 Watch Now: Feature Video
ಬೆಂಗಳೂರು: ಇಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಹಿಂದ ನಾಯಕ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿದ್ದು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿನ ನಾಮಫಲಕವನ್ನು ಸಿಬ್ಬಂದಿ ತೆರವುಗೊಳಿಸಿದರು. ಆ ಜಾಗಕ್ಕೆ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ಅಳವಡಿಸಿ, ಹೂವಿನ ಹಾರ ಹಾಕಿದರು.
ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರತಿಜ್ಞಾ ವಿಧಿ ಓದುತ್ತಿದ್ದಂತೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಕೊಠಡಿಯಲ್ಲಿ ನೂತನ ಸಿಎಂ ನಾಮಫಲಕ ಅಳವಡಿಸಲಾಗಿದೆ. ಇಷ್ಟು ದಿನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರ ಹೆಸರಿನ ನಾಮಫಲಕ ಹಾಕಲಾಗಿತ್ತು. ಈಗ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿಯಾಗಿದ್ದು, ಅವರ ಹೆಸರಿನ ನಾಮಫಲಕವನ್ನು ತೆರವುಗೊಳಿಸಿ ಹೊಸ ನಾಮಫಲಕ ಹಾಕಲಾಯಿತು.
ಪ್ರಮಾಣವಚನ ಸ್ವೀಕರಿಸಿದ ನಂತರ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪಶ್ಚಿಮ ದ್ವಾರದ ವಿಧಾನಸೌಧ ಪ್ರವೇಶ ಮಾಡಿದರು. ಸಿಎಂ ಕೊಠಡಿಗೆ ತೆರಳಿದ ಸಿದ್ದರಾಮಯ್ಯ ಅವರು ಪುಸ್ತಕಕ್ಕೆ ಸಹಿ ಹಾಕಿದರು. ಬಳಿಕ ಸಚಿವ ಸಂಪುಟ ಸಭೆ ಆರಂಭವಾಯಿತು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲ ಎಂಟು ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು. ಇದಕ್ಕೂ ಮುನ್ನ ವಿಧಾನಸೌಧದಲ್ಲಿರುವ ಸಿಎಂ ಕೊಠಡಿಯನ್ನು ಸ್ವಚ್ಛಗೊಳಿಸಿ ಹೂಗಳಿಂದ ಅಲಂಕರಿಸಲಾಗಿತ್ತು.
ಇದನ್ನೂ ನೋಡಿ: ಸಿದ್ದರಾಮಯ್ಯ, ಡಿಕೆಶಿ ಪ್ರಮಾಣ ವಚನಕ್ಕೆ ಹರಿದು ಬಂದ ಜನಸಾಗರ.. ಕಂಠೀರವ ಕ್ರೀಡಾಂಗಣದಲ್ಲಿ ಮೊಳಗಿದ ಜಯಘೋಷ