ಸಿದ್ದಗಂಗಾ ಮಠಕ್ಕೆ ನೂತನ ಸಚಿವ ಎಂ.ಬಿ ಪಾಟೀಲ್ ಭೇಟಿ.. - ಈಟಿವಿ ಭಾರತ್ ಕನ್ನಡ ನ್ಯೂಸ್
🎬 Watch Now: Feature Video
ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿ ಸರ್ಕಾರ ರಚನೆಯಾಗುತ್ತಿದೆ. ಇದರ ಬೆನ್ನಲ್ಲೇ ಕೈ ನಾಯಕರು ಟೆಂಪಲ್ ರನ್ ಶುರು ಮಾಡಿದ್ದಾರೆ. ಇಂದು ಸಿದ್ದಗಂಗಾ ಮಠಕ್ಕೆ ನೂತನ ಸಚಿವ ಎಂ.ಬಿ ಪಾಟಿಲ್ ಅವರು ತಮ್ಮ ಪತ್ನಿ ಆಶಾ ಪಾಟೀಲ್ ಜೊತೆ ಭೇಟಿ ನೀಡಿದ್ದು, ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ.
ದರ್ಶನ ಪಡೆದ ನಂತರ ಕೆಲ ಕಾಲ ಧ್ಯಾನ ಮಂದಿರದಲ್ಲಿ ಎಂ.ಬಿ ಪಾಟಿಲ್ ಕುಳಿತು ಪ್ರಾರ್ಥನೆ ಸಲ್ಲಿಸಿದ್ದು, ಸಿದ್ದಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಎಂ.ಬಿ ಪಾಟಿಲ್ ಅವರು, ಇಂದು ನಾನು ಶಾಸಕನಾಗಿ ಪ್ರಮಾಣ ಸ್ವೀಕರಿಸಿದ್ದೇನೆ. ಹೀಗಾಗಿ ರಾಜ್ಯದ ಸೇವೆ ಮಾಡಲು ಈ ಪುಣ್ಯಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಂಬಿ ಪಾಟೀಲ್ ಜೊತೆ ಕಾಂಗ್ರೆಸ್ನ ಸ್ಥಳೀಯ ಮುಖಂಡರಿದ್ದರು.
ಬಳಿಕ ಮಠಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನೂತನವಾಗಿ ಶಾಸಕರಾಗಿ ಆಯ್ಕೆಯಾಗಿ ಮೊದಲ ಬಾರಿ ಮಠಕ್ಕೆ ಭೇಟಿ ನೀಡಿದರು. ಈ ವೇಳೆ ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳ್ಕರ್ ನಂತರ ಧ್ಯಾನ ಮಂದಿರದಲ್ಲಿ ಕುಳಿತು ಕೆಲಕಾಲ ಧ್ಯಾನ ಮಾಡಿದರು.
ಇದನ್ನೂ ಓದಿ : ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು- ವಿಡಿಯೋ