ಹೊಸ ವರ್ಷಾಚರಣೆಗೆ ಕ್ಷಣಗಣನೆ.. 2023 ನ್ನು ಸ್ವಾಗತಿಸಲು ಬೆಂಗಳೂರಿನಲ್ಲಿ ಸಜ್ಜಾದ ಜನಸಾಗರ - etv bharat kannada
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17363270-thumbnail-3x2-tha.jpg)
ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಇದ್ದು, ರಾಜ್ಯ ರಾಜಧಾನಿಯಲ್ಲಿ ಜನರು ಸಂಭ್ರಮಾಚರಣೆಗೆ ತುದಿಗಾಲಿನಲ್ಲಿ ನಿಂತಿದ್ದಾರೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ತಡೆಯಲು ಖಾಕಿ ಪಡೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಬಾರ್, ಪಬ್, ರೆಸ್ಟೋರೆಂಟ್ ಎಲ್ಲೆಡೆ ಜನರ ಜಮಾವಣೆ ಹೆಚ್ಚಾಗುತ್ತಿದ್ದು, ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬಿಗ್ರೇಡ್ ರೋಡ್ನಲ್ಲಿ ನೂಕುನುಗ್ಗಲು ಆಗದಿರಲು ಪ್ರತ್ಯೇಕ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಸುಮಾರು 700ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.
Last Updated : Feb 3, 2023, 8:37 PM IST