ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೋರ್ಟ್ಗೆ ರಾಹುಲ್ ಗಾಂಧಿ ಗೈರು, ಮತ್ತೊಮ್ಮೆ ಸಮನ್ಸ್ ಜಾರಿ
🎬 Watch Now: Feature Video
Published : Dec 16, 2023, 7:04 PM IST
ಸುಲ್ತಾನ್ಪುರ: ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸುಲ್ತಾನ್ಪುರದ ಎಂಪಿ-ಎಂಎಲ್ಎ ನ್ಯಾಯಾಲಯ ಮತ್ತೆ ಸಮನ್ಸ್ ನೀಡಿದ್ದು, 2024ರ ಜನವರಿ 6 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ಶನಿವಾರ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರೂ, ರಾಹುಲ್ ಗಾಂಧಿ ಇಂದು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ರಾಹುಲ್ ಗಾಂಧಿ ಅವರು ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018ರ ಆಗಸ್ಟ್ 4ರಂದು ದೂರು ದಾಖಲಿಸಿದ್ದರು. ಸುಲ್ತಾನ್ಪುರದ ಎಂಪಿ- ಎಂಎಲ್ಎ ನ್ಯಾಯಾಲಯವು ಡಿಸೆಂಬರ್ 16 ರಂದು ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ ಎಂದು ಮಿಶ್ರಾ ಪರ ವಕೀಲ ಸಂತೋಷ್ ಕುಮಾರ್ ಪಾಂಡೆ ತಿಳಿಸಿದರು.
2018ರ ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ನವೆಂಬರ್ 18 ರಂದು ವಾದ- ಪ್ರತಿವಾದವನ್ನು ಆಲಿಸಿದ್ದ ನ್ಯಾಯಾಧೀಶ ಯೋಗೇಶ್ ಕುಮಾರ್ ಯಾದವ್ ತೀರ್ಪನ್ನು ಕಾಯ್ದಿರಿಸಿದ್ದರು. ಮುಂದಿನ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿದ್ದರು. ನವೆಂಬರ್ 27ರಂದು ವಿಚಾರಣೆಗೆ ನಡೆಸಿದ್ದ ನ್ಯಾಯಾಧೀಶರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡಿಸೆಂಬರ್ 16ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲು ಆದೇಶಿಸಿದ್ದರು. ಆದರೆ ಇಂದು ಕೂಡ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಗೈರಾಗಿದ್ದಾರೆ.
ಇದನ್ನೂ ಓದಿ: ಪಿಎಂ ಮೋದಿಯನ್ನ ಟೀಕಿಸಿದ್ದ ರಾಹುಲ್ಗೆ ಚುನಾವಣಾ ಆಯೋಗದ ನೋಟಿಸ್: ಕಾಂಗ್ರೆಸ್ ಹೇಳಿದ್ದೇನು?