ತೋರಿಸಿದ ಚಿಹ್ನೆಗೆ ಅಧಿಕಾರಿಗಳು ಮತ ಹಾಕಿಲ್ಲ ಎಂದು ಆರೋಪಿಸಿ ಧರಣಿ ಕುಳಿತ 85ರ ವೃದ್ಧೆ! - ಕರ್ನಾಟಕ ಕುರುಕ್ಷೇತ್ರ 2023
🎬 Watch Now: Feature Video
ಗದಗ: ಗದಗ ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಮೊದಲ ಮತ ಚಲಾಯಿಸುತ್ತಿರುವ ಯುವಕ, ಯುವತಿಯರಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಅಂತೆಯೇ ಜಿಲ್ಲೆಯಲ್ಲಿ 85 ವರ್ಷದ ವೃದ್ಧೆಯೊಬ್ಬರು ಮೊಮ್ಮಗನ ಜೊತೆ ಆಗಮಿಸಿ ಮುಂಡರಗಿ ಪಟ್ಟಣದ ಮತಗಟ್ಟೆ ಸಂಖ್ಯೆ 53ರಲ್ಲಿ ವೋಟ್ ಹಾಕಿದ್ದಾರೆ. ಆದರೆ ಅದೇ ಅಜ್ಜಿ, ನಾನು ತೋರಿಸಿದ ಚಿಹ್ನೆಗೆ ಅಧಿಕಾರಿಗಳು ಮತ ಹಾಕಿಲ್ಲ ಎಂದು ಆರೋಪಿಸಿ ಮತಗಟ್ಟೆ ಮುಂದೆ ಧರಣಿ ಕುಳಿತಿದ್ದಾರೆ.
85 ವರ್ಷದ ಮುಕ್ತುಂಬೀ ದೊಡ್ಡಮನಿ ಎಂಬ ವೃದ್ಧೆ ಮೊಮ್ಮಗನ ಜೊತೆ ಮತಗಟ್ಟೆಗೆ ಆಗಮಿಸಿದ್ದರು. ಆದರೆ ಅಜ್ಜಿಯೊಂದಿಗೆ ಮೊಮ್ಮಗನನ್ನು ಒಳಗೆ ಬಿಡಲು ಅಧಿಕಾರಿಗಳು ನಿರಾಕರಿಸಿದರು. ಕೊನೆಗೆ ಅಜ್ಜಿ ತೋರಿಸಿದ ಚಿಹ್ನೆಗೆ ಅಧಿಕಾರಿಗಳು ಮತ ಹಾಕದೇ ಬೇರೆ ಗುರುತಿಗೆ ಮತ ಹಾಕಿರುವುದಾಗಿ ವೃದ್ಧೆ ಆರೋಪಿಸಿದ್ದಾರೆ. ಮತಗಟ್ಟೆಯ ಮುಂದೆ ಧರಣಿ ಕುಳಿತಿದ್ದಾರೆ. ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಕೂಡಲೇ ಬರುವಂತೆ ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ: ಅಮೆರಿಕದಿಂದ ಬಂದು ಮತ ಚಲಾಯಿಸಿ ಕರ್ತವ್ಯ ಪ್ರಜ್ಞೆ ಮೆರೆದ ಬೆಂಗಳೂರಿನ ಯುವತಿ