ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್: ಶಿವಮೊಗ್ಗದಲ್ಲಿ ನಾಲ್ವರು ಸೆರೆ, ₹25 ಲಕ್ಷ ವಶಕ್ಕೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಶಿವಮೊಗ್ಗ : ಶಿವಮೊಗ್ಗ ಮತ್ತು ಭದ್ರಾವತಿ ವ್ಯಾಪ್ತಿಯಲ್ಲಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂದೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯ ಆರೋಪಿಯನ್ನು ಹೊಸಮನೆ ನಿವಾಸಿ ಸತೀಶ್ (28) ಎಂದು ಗುರುತಿಸಲಾಗಿದೆ. 25,46,336 ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಮಿಥುನ್ಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಕಳೆದ ಶನಿವಾರ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದವರ ಮೇಲೆ ಪೊಲೀಸರ ವಿಶೇಷ ತಂಡ ದಾಳಿ ನಡೆಸಿತ್ತು. ಈ ವೇಳೆ ಸತೀಶ್ ಮತ್ತು ಆತನ ಮೂವರು ಸಹಚರರನ್ನು ಬಂಧಿಸಲಾಗಿತ್ತು. 7.20 ಲಕ್ಷ ರೂ ನಗದು, ಮೂರು ಮೊಬೈಲ್, 1 ಮೊಪೆಡ್ ಬೈಕ್ ಅನ್ನು ವಶಕ್ಕೆ ಪಡೆಯಲಾಗಿತ್ತು. ಭಾನುವಾರ ಕಾರ್ತಿಕ್ ಎಂಬುವವರು ಸತೀಶ್ ವಿರುದ್ಧ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಸತೀಶ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ಗಳಲ್ಲಿ ಹೂಡಿಕೆ ಮಾಡಿದ್ದ ಒಟ್ಟು 18,26,336 ರೂಪಾಯಿಯನ್ನು ಪೊಲೀಸರು ಜಪ್ತಿ ಮಾಡಿ 2 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದರು.
ಇದನ್ನೂ ಓದಿ : ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ವಿಡಿಯೋ