thumbnail

By

Published : Feb 21, 2023, 10:55 PM IST

ETV Bharat / Videos

ಕಡಬ: ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ಆರಂಭ

ಕಡಬ (ದಕ್ಷಿಣ ಕನ್ನಡ): ಊರಿಗೆ ಬಂದು ಉಪಟಳ ನೀಡಿ ಇಬ್ಬರನ್ನು ಬಲಿ ಪಡೆದಿರುವ ಕಾಡಾನೆಗಳನ್ನು ಸೆರೆ ಹಿಡಿಯಲು ಈ ಭಾಗದಲ್ಲಿ ಇದೇ ಮೊದಲ ಬಾರಿಗೆ ಆಪರೇಷನ್ ಎಲಿಫೆಂಟ್ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಗಿನಿಂದಲೇ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದಾರೆ. ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ 5 ಆನೆಗಳನ್ನು ಕರೆ ತರಲಾಗಿದೆ. ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿವೆ. 

ನೂಜಿಬಾಳ್ತಿಲದ ಪುತ್ಯೆ ಭಾಗದಲ್ಲಿ ಕಾಡಾನೆ ಇದೆ ಎಂಬ ಮಾಹಿತಿಯ ಮೇರೆಗೆ ಅಲ್ಲಿಗೆ ತೆರಳಿ ಶೋಧ ಆರಂಭಿಸಲಾಗಿತ್ತು. ಆದರೆ ಕಾಡಿನಲ್ಲಿ ಕತ್ತಲು ಆವರಿಸಿದ ಕಾರಣ ಇಂದಿನ ಕಾರ್ಯಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ನಾಳೆ ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಗೊಳ್ಳಲಿದೆ. ಅರಣ್ಯ ಅಧಿಕಾರಿಗಳ ತಂಡಗಳು ಕಾಡಲ್ಲಿಯೇ ಬೀಡು ಬಿಟ್ಟಿದ್ದು, ಡ್ರೋನ್ ಮೂಲಕ ರಾತ್ರಿಯೂ ಕಾಡಾನೆಗಳ ಚಲನವಲನದ ಬಗ್ಗೆ ನಿಗಾ ಇಡಲಾಗಿದೆ. ರಾತ್ರಿ ಅರಣ್ಯ ಪ್ರದೇಶದಲ್ಲಿ ಸಂಚರಿಸುವ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಇಬ್ಬರು ಬಲಿ: ಸ್ಥಳೀಯರಿಂದ ಆಕ್ರೋಶ, 15 ಲಕ್ಷ ಪರಿಹಾರ ಘೋಷಿಸಿದ ಡಿಸಿ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.