thumbnail

ಅಮೆಜಾನ್‌ನಲ್ಲಿ ಪಾಕಿಸ್ತಾನದ ಧ್ವಜ ಮಾರಾಟ: ನಾಗ್ಪುರ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಿದ ಎಂಎನ್​ಎಸ್​

By ETV Bharat Karnataka Team

Published : Aug 22, 2023, 3:56 PM IST

ನಾಗ್ಪುರ (ಮಹಾರಾಷ್ಟ್ರ): ಅಮೆಜಾನ್​ ಆನ್​ಲೈನ್ ಶಾಪಿಂಗ್ ವೆಬ್​ಸೈಟ್​ನಲ್ಲಿ ಪಾಕಿಸ್ತಾನದ ಧ್ವಜ ಮಾರಾಟ ಮಾಡುವುದನ್ನು ಖಂಡಿಸಿ ನಾಗ್ಪುರದಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್​ಎಸ್​) ಕಾರ್ಯಕರ್ತರು ಇಂದು (ಮಂಗಳವಾರ) ಅಮೆಜಾನ್ ಕಚೇರಿ ಮೇಲೆ ದಾಳಿ ಮಾಡಿದರು. ಇಲ್ಲಿನ ಗಣೇಶಪೇಠ್​​ನಲ್ಲಿರುವ ಕಚೇರಿಗೆ ನುಗ್ಗಿದ ಕಾರ್ಯಕರ್ತರು ಪೀಠೋಪಕರಣ ಧ್ವಂಸಗೊಳಿಸಿ, ಆಕ್ರೋಶ ಹೊರಹಾಕಿದರು.

ಅಮೆಜಾನ್​ನಲ್ಲಿ ಪಾಕಿಸ್ತಾನ ಧ್ವಜ ಆರ್ಡರ್​ ಮಾಡಿದರೆ 24 ಗಂಟೆಯೊಳಗೆ ಮನೆಗೆ ತಲುಪಿಸಲಾಗುತ್ತದೆ ಎಂದು ಜಾಹೀರಾತು ಹೊರಡಿಸಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಪಾಕ್ ಧ್ವಜ ಮಾರಾಟ ಮಾಡದಂತೆ ಕಂಪನಿಯ ವ್ಯವಸ್ಥಾಪಕರಿಗೆ ಈ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು. ಆದರೂ, ಮಾರಾಟ ನಿಲ್ಲಿಸಿಲ್ಲ ಎಂದು ತಿಳಿಸಿದರು.

ಅಮೆಜಾನ್ ಕಚೇರಿ ಮುಂಭಾಗದಲ್ಲಿ ಸೇರಿದ ಕಾರ್ಯಕರ್ತರು 'ಬಾಯ್ಕಾಟ್​ ಅಮೆಜಾನ್​' ಫಲಕಗಳನ್ನು ಹಿಡಿದು ಪ್ರತಿಭಟಿಸಿದರು. ಕೂಡಲೇ ಕಂಪನಿ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು. ನಂತರ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಘೋಷಣೆಗಳನ್ನು ಕೂಗುತ್ತಾ ಕಚೇರಿಯಲ್ಲಿದ್ದ ಪೀಠೋಪಕರಣಗಳನ್ನು ಒಡೆದು ಹಾಕಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಇದನ್ನೂ ಓದಿ: Server Hack: ಅಮೆಜಾನ್ ಕಂಪನಿ ಸರ್ವರ್ ಹ್ಯಾಕ್, ಕೋಟ್ಯಂತರ ಹಣ ವಂಚನೆ; ಓರ್ವನ ಬಂಧನ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.