ಮಗುವಿಗೆ ಕೋಳಿ ಕುಕ್ಕಿದ ಆರೋಪ: ಶಾಲೆಗೆ ಬೀಗ ಹಾಕಿ ಪೋಷಕರಿಂದ ಪ್ರತಿಭಟನೆ - ಪೋಷಕರು ಪ್ರತಿಭಟನೆ
🎬 Watch Now: Feature Video
Published : Nov 24, 2023, 2:04 PM IST
ಚಾಮರಾಜನಗರ: ಶಾಲೆಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಕೋಳಿಯೊಂದು ಬಾಲಕಿಗೆ ಕುಕ್ಕಿದ ಘಟನೆ ಹನೂರು ತಾಲೂಕಿನ ಪೆದ್ದನಪಾಳ್ಯ ಎಂಬ ಗ್ರಾಮದಲ್ಲಿ ನಡೆದಿದ್ದು, ಆಕ್ರೋಶಗೊಂಡ ಪಾಲಕರು ಸ್ಕೂಲ್ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಗುರುವಾರ ಪೆದ್ದನ ಪಾಳ್ಯ ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ್ದು, ಗುರುವಾರದಂದೇ ಶಾಲೆಗೆ ಬೀಗ ಜಡಿದು ಮಕ್ಕಳನ್ನು ಪಾಲಕರು ಮನೆಗೆ ಕರೆದೊಯ್ದಿದ್ದರು. ಇಂದೂ ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರು ಪ್ರತಿಭಟನೆ ನಡೆಸಿ, ಶಿಕ್ಷಣ ಇಲಾಖೆ ವಿರುದ್ಧ ಅಕ್ರೋಶ ಹೊರಹಾಕಿದರು.
ಇದನ್ನೂ ಓದಿ: ಹಾಡಹಗಲೇ ಕೋಳಿ ಶೆಡ್ ಮೇಲೆ ದಾಳಿ ಮಾಡಿದ ಚಿರತೆ.. ನೂರಕ್ಕೂ ಹೆಚ್ಚು ನಾಟಿ ಕೋಳಿಗಳು ಸಾವು
ಶಾಲೆಯ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ಹಸು, ಕರುಗಳನ್ನು ಕಟ್ಟುತ್ತಿದ್ದು, ಕೋಳಿಗಳನ್ನು ಮೇಯಲು ಬಿಡುತ್ತಿರುವ ಹಿನ್ನೆಲೆಯಲ್ಲಿ ಘಟನೆ ಜರುಗಿದೆ. ಕೂಡಲೇ ಶಿಕ್ಷಣ ಇಲಾಖೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪಾಲಕರ ಮನವೊಲಿಸುವ ಪ್ರಯತ್ನ ಮಾಡಿದರು.
ಇದನ್ನೂ ಓದಿ: ಅಂಗವೈಕಲ್ಯ ಮೆಟ್ಟಿನಿಂತು ಜೀವನ ಕಟ್ಟಿಕೊಂಡ ಯುವಕ : ನಾಟಿ ಕೋಳಿ ಫಾರಂ ಉದ್ಯಮ ಆರಂಭಿಸಿ ಯಶಸ್ಸು