ಡ್ರಗ್ಸ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಕಲ್ಲು ತೂರಾಟ, ವಾಹನ ಜಖಂ: ವಿಡಿಯೋ - ಪೊಲೀಸರ ಮೇಲೆ ದಾಳಿ
🎬 Watch Now: Feature Video
ಬದೌನ್, ಉತ್ತರಪ್ರದೇಶ: ಡ್ರಗ್ಸ್ ದಂಧೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪರಿಶೀಲನೆಗೆ ಬಂದಿದ್ದ ವೇಳೆ ಆರೋಪಿಗಳು ಮತ್ತವರ ಗ್ಯಾಂಗ್ ಪೊಲೀಸರು, ವಾಹನದ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ತಪಾಸಣೆ ಬಂದು ಮನೆಯೊಂದರ ಮೇಲೆ ದಾಳಿ ಮಾಡಿದಾಗ ಆರೋಪಿಗಳು ಪೊಲೀಸರು ವಿರುದ್ಧವೇ ಕಿತ್ತಾಟಕ್ಕಿಳಿದಿದ್ದಾರೆ. ಬಳಿಕ ನೆರೆಹೊರೆಯವರನ್ನು ಜಮಾಯಿಸಿ ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ಕಲ್ಲು ತೂರಾಟ ಮಾಡಿ ಹಲವು ವಾಹನಗಳನ್ನು ಜಖಂ ಮಾಡಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಸ್ಥಳಕ್ಕಾಗಮಿಸಿ ಇಡೀ ಪ್ರದೇಶದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ವಿಡಿಯೋ ಆಧಾರದ ಮೇಲೆ ದುಷ್ಕರ್ಮಿಗಳ ಪತ್ತೆಗ ಪೊಲೀಸರು ಜಾಲ ಬೀಸಿದ್ದಾರೆ. ಇದರಲ್ಲಿ ರೌಡಿಗಳ ಗ್ಯಾಂಗ್ ಸೇರಿಕೊಂಡಿದೆ ಎಂದು ಹೇಳಲಾಗಿದೆ.
Last Updated : Feb 3, 2023, 8:35 PM IST