ಡ್ಯೂಟಿ ಮುಗಿದಿದೆ ಎಂದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಸವಾರನಿಂದ ಹಲ್ಲೆ- Video - ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ಸವಾರನಿಂದ ಹಲ್ಲೆ
🎬 Watch Now: Feature Video
Published : Sep 3, 2023, 10:04 AM IST
ಚಿಕ್ಕಮಗಳೂರು: ವಾಹನ ಸವಾರರೊಬ್ಬರು ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ನಯಾರ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಮಧು ಹುರುಡಿ ಹಲ್ಲೆ ಮಾಡಿದ್ದಾರೆ ಎಂದು ಬಂಕ್ ಸಿಬ್ಬಂದಿ ಆರೋಪಿಸಿದ್ದು, ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನನ್ನ ಡ್ಯೂಟಿ ಮುಗಿಯಿತು, ಬೇರೆಯವರು ಪೆಟ್ರೋಲ್ ಹಾಕ್ತಾರೆ ಎಂದು ಸಿಬ್ಬಂದಿ ಹೇಳಿದ್ದಕ್ಕೆ ಕೋಪಗೊಂಡ ಸವಾರ, ಬಂಕ್ ಮ್ಯಾನೇಜರ್ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಕಾರಲ್ಲಿದ್ದ ಕ್ರಿಕೆಟ್ ಬ್ಯಾಟ್ ಹೊರತೆಗೆದು ಹಲ್ಲೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಕಾರಿಗೆ ಪೆಟ್ರೋಲ್ ತುಂಬಿಸಿಕೊಳ್ಳಲು ಮಧು ಆಗಮಿಸಿದ್ದರು. ಆಗ ಸಿಬ್ಬಂದಿಯೊಬ್ಬರು, ನನ್ನ ಡ್ಯೂಟಿ ಮುಗಿಯಿತು ಬೇರೆಯವರು ಪೆಟ್ರೋಲ್ ಹಾಕ್ತಾರೆ ಎಂದಿದ್ದಾರೆ. ಇದರಿಂದ ಕೋಪಗೊಂಡು ಹಲ್ಲೆ ಮಾಡಿದ್ದಾರೆ ಎಂದು ಬಂಕ್ ಮ್ಯಾನೇಜರ್ ಆರೋಪಿಸಿದ್ದಾರೆ. ಗಾಯಾಳು ಸಿಬ್ಬಂದಿಯನ್ನು ಮೂಡಿಗೆರೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಧು ವಿರುದ್ಧ ಕ್ರಮಕ್ಕೆ ಬಂಕ್ ಸಿಬ್ಬಂದಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಬಾರ್ ಕ್ಯಾಶಿಯರ್ಗೆ ಚಾಕು ಇರಿದ ದುಷ್ಕರ್ಮಿಗಳು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ