ಗುಜರಾತ್‌ನ ಬನಸ್ಕಾಂತದಲ್ಲಿ ಪಿಎಂ ಮೋದಿ ರೋಡ್ ಶೋ: ಅಂಬಾಜಿ ಸನ್ನಿಧಿಯಲ್ಲಿ ವಿಶೇಷ ಪೂಜೆ - ಮೋದಿ ರೋಡ್ ಶೋ
🎬 Watch Now: Feature Video
Published : Oct 30, 2023, 12:43 PM IST
|Updated : Oct 30, 2023, 1:11 PM IST
ಬನಸ್ಕಾಂತ (ಗುಜರಾತ್): ಗುಜರಾತ್ಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನೇರಂದ್ರ ಮೋದಿ ಅವರಿಂದು ಬೆಳಗ್ಗೆ ಬನಸ್ಕಾಂತದಲ್ಲಿ ರೋಡ್ ಶೋ ನಡೆಸಿದರು. ಪ್ರಧಾನಿ ಅವರನ್ನು ನೋಡಲು ಸಹಸ್ರಾರು ಮಂದಿ ಜಮಾಯಿಸಿದ್ದರು. ಅಂಬಾಜಿ ದೇವಸ್ಥಾನದಲ್ಲಿ ಮೋದಿ ವಿಶೇಷ ಪೂಜೆ ಸಲ್ಲಿಸಿದರು.
ಮೆಹಸಾನಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೆವಾಡಿಯಾಗೆ ಭೇಟಿ ನೀಡಲಿದ್ದು, ಅಲ್ಲಿ ಏಕತೆಯ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ನಂತರ ರಾಷ್ಟ್ರೀಯ ಏಕತಾ ದಿವಸ್ ಆಚರಣೆಗಳು ಜರುಗಲಿವೆ. ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನೂ ಪ್ರಧಾನಿ ಮೋದಿ ಮಾಡಲಿದ್ದಾರೆ. ಅದಾದ ನಂತರ, ಪ್ರಧಾನ ಮಂತ್ರಿ ಅವರು ಆರಂಭ್ 5.0 ರಲ್ಲಿ 98 ನೇ ಕಾಮನ್ ಫೌಂಡೇಶನ್ ಕೋರ್ಸ್‌ನ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ ಅಂಬಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದು, ಪ್ರಧಾನಿ ಮೋದಿ ಅವರೊಂದಿಗೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.