ಸಿಎಂ ಬೊಮ್ಮಾಯಿ ಕಾರು ತಪಾಸಣೆ ನಡೆಸಿದ ಪೊಲೀಸರು: ವಿಡಿಯೋ - ತಪಾಸಣೆ

🎬 Watch Now: Feature Video

thumbnail

By

Published : Mar 31, 2023, 12:42 PM IST

ದೊಡ್ಡಬಳ್ಳಾಪುರ: ಇಲ್ಲಿನ ದೇವಸ್ಥಾನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚೆಕ್ ಪೋಸ್ಟ್​​ನಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಸಿಎಂ ಇಂದು ಬೆಂಗಳೂರಿನ ತಮ್ಮ ನಿವಾಸದಿಂದ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲು ತೆರಳುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹುಡ್ಯ ಬಳಿಯ ಚೆಕ್ ಪೋಸ್ಟ್​​ನಲ್ಲಿ ಕಾರು ತಡೆದು ತಪಾಸಣೆ ನಡೆಸಿದ ಸಿಬ್ಬಂದಿ ನಂತರ ಅವರು ತೆರಳಲು ಅನುವು ಮಾಡಿಕೊಟ್ಟರು. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣಕಾಸು ಮತ್ತು ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ 6 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ವಾಹನಗಳ ತಪಾಸಣೆ ವೇಳೆ ಮುಖ್ಯಮಂತ್ರಿಗಳೆಂಬ ಕಾರಣಕ್ಕೆ ವಿನಾಯಿತಿ ನೀಡದ ಪೊಲೀಸರು ಅವರ ಕಾರನ್ನೂ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್​ಪಿ ನಾಗರಾಜು ಸೇರಿದಂತೆ ಚುನಾವಣಾ ಸಿಬ್ಬಂದಿ ಹಾಜರಿದ್ದರು. 

ಇದನ್ನೂ ಓದಿ: ಇಂದಿನಿಂದ ನೀತಿ ಸಂಹಿತೆ ಜಾರಿ.. ಗಡಿಭಾಗದ ಚೆಕ್ ಪೋಸ್ಟ್​​ಗಳಲ್ಲಿ ಅಧಿಕಾರಿಗಳು ಅಲರ್ಟ್

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.