ಯುವಕನನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಐವರ ಬಂಧನ: ಪೊಲೀಸ್​ ಕಮಿಷನರ್ ಸಂತೋಷ ಬಾಬು - etv bharat kannada

🎬 Watch Now: Feature Video

thumbnail

By

Published : Jul 11, 2023, 6:05 PM IST

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಸಂತೋಷ್ ಬಾಬು ಮಾತನಾಡಿದ್ದಾರೆ. ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಎರಡು ವಿಡಿಯೋಗಳು ನಮ್ಮ ಗಮನಕ್ಕೆ ಬಂದಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್, ವಿನಾಯಕ್,ಗಣೇಶ್,ಸಚಿನ್ ,ಮಂಜುನಾಥ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದರು. 

ಇನ್​ಸ್ಟಾಗ್ರಾಮ್​ನಲ್ಲಿ ಸಂತ್ರಸ್ತ ಸಂದೀಪ್, ಪ್ರಜ್ವಲ್ ತಾಯಿಗೆ ಕೆಟ್ಟದಾಗಿ ಬೈದಿದ್ದ. ಈ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಇದುವೆರಗೂ ಸಂದೀಪ್ ದೂರು ಕೊಟ್ಟಿಲ್ಲ. ಯಾರ ಸಂಪರ್ಕದಲ್ಲೂ ಸಹ ಇಲ್ಲ. ಮೂರು ನಾಲ್ಕು ತಿಂಗಳ ಹಿಂದೆ ನಡೆದ ಘಟನೆ ಇದಾಗಿದೆ. ಹುಬ್ಬಳ್ಳಿಯ ಸೆಟ್ಲಮೆಂಟ್​ನಲ್ಲಿ ನಡೆದ ಘಟನೆ. ಆದರೆ, ಸ್ಥಳ ಯಾವುದು ಎಂದು ಖಚಿತವಾಗಿಲ್ಲ. ಪೊಲೀಸರು ಈ ತರಹದ ಘಟನೆ ಆಗೋ ಮುಂಚೆ ಎಚ್ಚೆತ್ತುಕೊಳ್ಳಬೇಕಿತ್ತು. ವಿಡಿಯೋ ಇರುವ ಸಂದೀಪ್‍ಗಾಗಿ ಹುಡುಕಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಜೈನ ಮುನಿ ಹತ್ಯೆ ಮಾಡಿದವರಿಗೆ ಶೀಘ್ರ ಶಿಕ್ಷೆ ಆಗಬೇಕು: ಜೈನ ಸಾಧುಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ದಿಗಂಬರ ಜೈನರ ಆಗ್ರಹ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.