ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಟಿಫಿನ್ ಬಾಕ್ಸ್, ಹೊಲಿಗೆ ಯಂತ್ರಗಳ ಜಪ್ತಿ - assembly election 2023

🎬 Watch Now: Feature Video

thumbnail

By

Published : Apr 19, 2023, 11:09 AM IST

ಬೆಳಗಾವಿ: ಮತದಾರರಿಗೆ ಹಂಚಲು ತಂದಿದ್ದ ಹೊಲಿಗೆ ಯಂತ್ರಗಳು ಮತ್ತು ಟಿಫಿನ್ ಬಾಕ್ಸ್​ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಜೆಡಿಎಸ್ ಅಭ್ಯರ್ಥಿ ಸೌರವ್ ಚೋಪ್ರಾ ಅವರ ಭಾವಚಿತ್ರವಿರುವ ಟಿಫಿನ್ ಬಾಕ್ಸ್ ವಶಕ್ಕೆ ಪಡೆಯಲಾಗಿde. ಸವದತ್ತಿ ಪಟ್ಟಣದ ಸಂಭವ ಟಿಂಬರ್ ಯಾರ್ಡ್ ಗೋದಾಮಿನಲ್ಲಿ ಹೊಲಿಗೆ ಯಂತ್ರ ಹಾಗೂ ಟಿಫಿನ್ ಬಾಕ್ಸ್ ಗಳನ್ನು ಮತದಾರರಿಗೆ ಹಂಚಲು ಸಂಗ್ರಹಿಸಲಾಗಿತ್ತು. ಸುಮಾರು 2300ಕ್ಕೂ ಅಧಿಕ ಹೊಲಿಗೆ ಯಂತ್ರ(ರಾಟೆ)ಗಳನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 

ಖಚಿತ ಮಾಹಿತಿ ಆಧಾರ ಮೇಲೆ ಜಿಎಸ್​ಟಿ ಅಧಿಕಾರಿಗಳು ಹಾಗೂ ಸ್ಥಳೀಯ ಚುನಾವಣೆ ಅಧಿಕಾರಿಗಳ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದೆ. ಹೊಲಿಗೆ ಯಂತ್ರಗಳ ಮೇಲೆ ಇರುವ ಚೋಪ್ರಾ ಸಿಂಬಲ್ ಹಾಗೂ ಫೋಟೋಗಳನ್ನ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಹೊಲಿಗೆ ಯಂತ್ರಗಳ ಬಿಲ್ ಹಾಗೂ ಅದಕ್ಕೆ ಬೇಕಾದ ದಾಖಲೆಗಳನ್ನು ಟಿಂಬರ್ ಯಾರ್ಡ್ ನವರು ಅಧಿಕಾರಿಗಳಿಗೆ ಒದಗಿಸಿದ್ದಾರೆ. ನೀತಿ ಸಂಹಿತೆ ಬರುವ ಮುಂಚೆ ಇವುಗಳನ್ನು ತರಲಾಗಿದೆ ಎಲ್ಲಿಯೂ ಹಂಚಿಲ್ಲ ಎಂದು ಅಧಿಕಾರಿಗಳಿಗೆ ಅಭ್ಯರ್ಥಿ ಕಡೆಯವರು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ. 

ಪೊಲೀಸರ ನೇತೃತ್ವದಲ್ಲಿ ಗೌಡೌನ್ ಸೀಜ್ ಮಾಡಿರುವ ಅಧಿಕಾರಿಗಳು ಹೊಲಿಗೆ ಯಂತ್ರ ಹಾಗೂ ಟಿಫಿನ್ ಬಾಕ್ಸ್ ಗಳನ್ನ ವಶಕ್ಕೆ ಪಡೆದು ಬೇರೆಡೆ ಸ್ಥಳಾಂತರಿಸಿದ್ದಾರೆ. ತಾಲೂಕು ಚುನಾವಣಾಧಿಕಾರಿ, ತಹಶೀಲ್ದಾರ್​, ಫ್ಲೈಯಿಂಗ್ ಸ್ಕ್ವಾಡ್ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸವದತ್ತಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಕೆಜಿಎಫ್​ ಬಾಬು ಮನೆ ಮೇಲೆ ಐಟಿ ದಾಳಿ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.