ಸಿಎಂ ಪದಗ್ರಹಣಕ್ಕಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ ಶುರು: ವಿಡಿಯೋ - ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ

🎬 Watch Now: Feature Video

thumbnail

By

Published : May 17, 2023, 2:23 PM IST

ಬೆಂಗಳೂರು: ರಾಜ್ಯದ ಮುಂದಿನ ಸಿಎಂ ಯಾರಾಗಲಿದ್ದಾರೆಂಬ ತೀವ್ರ ಸಸ್ಪೆನ್ಸ್​ ಮಧ್ಯೆಯೇ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 'ಹೊಸ ಸಿಎಂ ಪ್ರಮಾಣವಚನಕ್ಕೆ' ಸಿದ್ಧತೆ ನಡೆಸಲಾಗುತ್ತಿದೆ. ನಾಳೆಯೇ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವೇದಿಕೆ ಸಿದ್ಧಪಡಿಸಿಲು ಅಗತ್ಯ ಪರಿಕರಗಳನ್ನು ಕ್ರೀಡಾಂಗಣಕ್ಕೆ ತರಲಾಗಿದೆ. ಈಗಾಗಲೇ ಪೊಲೀಸ್​ ಅಧಿಕಾರಿಗಳು ಕೂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದ ಮುಂದಿನ ಸಿಎಂ ಆಗಿ ಸಿದ್ದರಾಮಯ್ಯ ಅವರು ಬಹುತೇಕ ಆಯ್ಕೆಯಾಗಲಿದ್ದಾರೆ ಎಂದು ರಾಜಕೀಯ ಪಡಸಾಲೆಯಲ್ಲಿ ಬಲವಾಗಿ ಕೇಳಿಬರುತ್ತಿದೆ. ಸಿಎಂ ಪ್ರಬಲ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರ ಜೊತೆ ಇಂದು ಮಾತುಕತೆ ನಡೆಸಿದರು. ಬಳಿಕ ಇಬ್ಬರು ನಾಯಕರು ಅಲ್ಲಿಂದ ತೆರಳಿದ್ದು, ಸಿಎಂ ಯಾರು ಎಂಬ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್​ ಕಾರ್ಯಕರ್ತರು, ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಯಾರು ಸಿಎಂ? ದೆಹಲಿಯಲ್ಲಿ ರಾಹುಲ್‌ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.