ಖರ್ಗೆ ತವರಿನಲ್ಲಿ ಮೋದಿ ರಣಕಹಳೆ: ಪ್ರಧಾನಿಗೆ ಮಲ್ಲಿಕಾರ್ಜುನ್ ಮೆಗಾ ಟಕ್ಕರ್ - AICC General Secretary Priyanka Gandhi
🎬 Watch Now: Feature Video
ಕಲಬುರಗಿ : ರಾಜ್ಯದಲ್ಲಿ 2023 -ವಿಧಾನಸಭೆ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿದ್ದು, ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲೇಬೇಕು ಎಂದು ಬಿಜೆಪಿ ಪಣ ತೊಟ್ಟಿದೆ. ಆದರೆ, ಯಾವುದೇ ಕಾರಣಕ್ಕೂ ಬಿಜೆಪಿ ಆಸೆ ಈಡೇರಬಾದು ಎಂದು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ.
ಪ್ರತಿಷ್ಠಿತ ಕಣದಲ್ಲಿ ಒಂದಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ 6 ಕಿಲೋ ಮೀಟರ್ ಭರ್ಜರಿ ರೋಡ್ ಶೋ ನಡೆಸಿದರು. ಕಲಬುರಗಿ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು. ತೆರೆದ ವಾಹನದಲ್ಲಿ ಪ್ರಚಾರ ಕೈಗೊಂಡ ಮೋದಿಗೆ ಮಾರ್ಗದ ಉದ್ದಕ್ಕೂ ನೆರೆದಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೂಮಳೆಯನ್ನೇ ಸುರಿಸಿದರು.
ಮೋದಿ ರೋಡ್ ಶೋ ಮಾಡಿದ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ಸುಮಾರು ಮೂರೂವರೆ ಕಿಲೋ ಮೀಟರ್ ರೋಡ್ ಶೋ ನಡೆಸಿ ಕಾಂಗ್ರೆಸ್ ಪರ ಅಲೆ ಎಬ್ಬಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿರುವ ಬಿಜೆಪಿ ಸರ್ಕಾರ ಶೇ. 40ರಷ್ಟು ಭ್ರಷ್ಟ ಸರ್ಕಾರ ಆಗಿದೆ. ಅದನ್ನು ಕಿತ್ತೊಗೆದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಡಬಲ್ ಇಂಜಿನ್ ಸರ್ಕಾರದ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ನಟ ಸುದೀಪ್ ಚುನಾವಣೆ ಪ್ರಚಾರ: ಅಭಿಮಾನಿಗಳ ನೂಕುನುಗ್ಗಲು, ಪೊಲೀಸರಿಂದ ಲಘು ಲಾಠಿ ಪ್ರಹಾರ