ಪ್ರಧಾನಿ ನರೇಂದ್ರ ಮೋದಿ ತಾತ್ಕಾಲಿಕ ಪ್ರವಾಸ: ಎಸ್‌ಪಿಜಿ ಟೀಮ್ನಿಂದ ಪರಿಶೀಲನೆ - Prime Minister Narendra Modi
🎬 Watch Now: Feature Video
Published : Jan 17, 2024, 3:10 PM IST
ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾತ್ಕಾಲಿಕ ಪ್ರವಾಸ ಪಟ್ಟಿಯಂತೆ ಜನವರಿ 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಗ್ಗೆ 9.35 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಆಗಮನ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ಎಸ್‌ಪಿಜಿ ತಂಡವು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದೆ.
ದೆಹಲಿಯಿಂದ ವಿಶೇಷ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 9.35 ಬಂದಿಳಿಯಲಿರುವ ಪ್ರಧಾನಿ ಮೋದಿ, ಬೆಳಗ್ಗೆ 9.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೋಲಾಪುರಕ್ಕೆ ಪ್ರಯಾಣಿಸಿ, ಅಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮರಳಿ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 1 ಗಂಟೆ 5 ನಿಮಿಷಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಎರಡು ದಿನ ಮುಂಚಿತವಾಗಿಯೇ ವಿಮಾನ ನಿಲ್ದಾಣ ಪರಿಶೀಲನೆ ನಡೆಸಿದ ಎಸ್‌ಪಿಜಿ ತಂಡದವರು ಬಂದೋಬಸ್ತ್ ಕೈಗೊಂಡಿದ್ದಾರೆ.
ಇದನ್ನೂ ಓದಿ: ಫ್ಲೈಟ್ ಮೋಡ್‌ನಲ್ಲಿ ಇಂಡಿಗೋ: ದೇಶಾದ್ಯಂತ ಪ್ರಯಾಣಿಕರಿಗೆ ಸಂಕಷ್ಟ