ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ - ಖಾಸಗಿ ಎಸಿ ಸ್ಲೀಪರ್ ಕೋಚ್ ಬಸ್ ಪಲ್ಟಿ

🎬 Watch Now: Feature Video

thumbnail

By ETV Bharat Karnataka Team

Published : Oct 19, 2023, 11:41 AM IST

ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಸಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಬೆಳಗಾವಿ ಕಡೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.‌

ಶಬರಿಮಲೆ ಯಾತ್ರಿಕರ ಬಸ್​ ಅಪಘಾತ : ಬುಧವಾರ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಕರ್ನಾಟಕ ಯಾತ್ರಾರ್ಥಿಗಳಿದ್ದ ಬಸ್​ ಅಪಘಾತವಾಗಿತ್ತು. ಘಟನೆಯಲ್ಲಿ ಕೆಲ ಶಬರಿಮಲೆ ಯಾತ್ರಾರ್ಥಿಗಳಿಗೆ ಗಾಯವಾಗಿತ್ತು. ಗಾಯಗೊಂಡ ಯಾತ್ರಾರ್ಥಿಗಳನ್ನು ಸ್ಥಳೀಯ ಮತ್ತು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋಲಾರದ ಯಾತ್ರಾರ್ಥಿಗಳ ಬಸ್​ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆಗೆ ಹೋಗುವಾಗ ಕೊಲ್ಲಂನಲ್ಲಿ ಅಪಘಾತವಾಗಿತ್ತು. ಅಪಘಾತದಿಂದಾಗಿ ವಾಹನ ಸಂಚಾರ ವ್ಯತ್ಯಯವಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ :  ರಸ್ತೆಗೆ ಬಿದ್ದ ಕಲ್ಲುಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಟ್ರಾಫಿಕ್ ಪೊಲೀಸ್: ವಿಡಿಯೋ

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.