MP Assembly Election 2023: ನರ್ಮದಾ ನದಿಗೆ ಪೂಜೆ ಸಲ್ಲಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ - priyanka gandhi narmada pooja
🎬 Watch Now: Feature Video
ಜಬಲ್ಪುರ (ಮಧ್ಯಪ್ರದೇಶ) : ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪ್ರಚಾರ ಕಾರ್ಯ ಪ್ರಾರಂಭಿಸಿವೆ. ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗ್ವಾರಿಘಾಟ್‌ಗೆ ಆಗಮಿಸಿ ಮಧ್ಯಪ್ರದೇಶದ ಜೀವನಾಡಿ ಎಂದು ಪರಿಗಣಿಸಲಾದ ನರ್ಮದಾ ನದಿಗೆ ಪೂಜೆ ನೆರವೇರಿಸಿದರು. ಈ ವೇಳೆ ಮಧ್ಯಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕಮಲ್ ನಾಥ್, ಪಕ್ಷದ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೆಪಿ ಅಗರವಾಲ್ ಮತ್ತು ರಾಜ್ಯಸಭಾ ಸಂಸದ ವಿವೇಕ್ ಟಂಕಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಇಂದಿನಿಂದ ಚುನಾವಣಾ ಪ್ರಚಾರ ಪ್ರಾರಂಭಿಸಿದೆ. ಇಂದು ಜಬಲ್ಪುರದಲ್ಲಿ ಪ್ರಿಯಾಂಕಾ ಗಾಂಧಿ ದೊಡ್ಡ ಸಭೆ ನಡೆಸುತ್ತಿದ್ದು, ಸಭೆಗೂ ಮುನ್ನ ನರ್ಮದಾ ಮಾತೆಗೆ ಪೂಜೆ ಸಲ್ಲಿಸಿದರು. ಈ ಬಾರಿ ಹಿಂದುತ್ವದ ವಿಚಾರದಲ್ಲಿ ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಕಾಣಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಹೀಗಾಗಿ, ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ಜೈ ಶ್ರೀ ರಾಮ್ ಮತ್ತು ಜೈ ಬಜರಂಗ ಬಲಿ ಘೋಷಣೆಗಳನ್ನು ಹೇಳುತ್ತಿದ್ದಾರೆ. ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರಂತಹ ಹಿರಿಯ ಕೈ ನಾಯಕರು ಚುನಾವಣಾ ಸಭೆಗಳಲ್ಲಿ ಹಿಂದುತ್ವದ ವಿಷಯದ ಬಗ್ಗೆ ಉನ್ನತ ಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದ ಈ ಬದಲಾವಣೆ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಇದನ್ನೂ ಓದಿ : ಶಿಮ್ಲಾದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಿಯಾಂಕಾ ಗಾಂಧಿ- ವಿಡಿಯೋ