ಅರಣ್ಯ ಇಲಾಖೆ ವಿರುದ್ಧ ಶಿವಮೊಗ್ಗದಲ್ಲಿ ಹಾಲಿ, ಮಾಜಿ ಶಾಸಕರ ಅಹೋರಾತ್ರಿ ಪ್ರತಿಭಟನೆ
🎬 Watch Now: Feature Video
ಶಿವಮೊಗ್ಗ: ಸಾಗುವಳಿ ಭೂಮಿಯನ್ನು ತೆರವು ಮಾಡಿರುವ ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ಮಾಜಿ ಶಾಸಕ ಹರತಾಳು ಹಾಲಪ್ಪ ಜಂಟಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ಹೊಸನಗರ ತಾಲೂಕು ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು ಅರಣ್ಯ ಇಲಾಖೆಯವರು ಜೆಸಿಬಿ ಮೂಲಕ ತೆರವು ಗೊಳಿಸಿದ್ದರು. ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನಿನ್ನೆ (ಶನಿವಾರ) ಹೊಸನಗರ ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿದ್ದಾರೆ.
"ಹೊಸನಗರ ತಾಲೂಕು ಕಚ್ಚಿಗೆಬೈಲು ಗ್ರಾಮದಲ್ಲಿ ಹಲವು ವರ್ಷಗಳಿಂದ ಗ್ರಾಮಸ್ಥರು ಉಳುಮೆ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಅರಣ್ಯ ಇಲಾಖೆಯವರು ಕಂದಾಯ ಭೂಮಿಯನ್ನು ಏಕಾಏಕಿ ತೆರವು ಮಾಡಿದ್ದಾರೆ. ಇದು ಅರಣ್ಯ ಇಲಾಖೆಯ ದೌರ್ಜನ್ಯದ ನಡೆ. ಇದರಿಂದ ರೈತರಿಗೆ ಭೂಮಿ ಇಲ್ಲದಂತಾಗಿದೆ" ಎಂದು ಆರಗ ಜ್ಞಾನೇಂದ್ರ ಹಾಗೂ ಹರತಾಳು ಹಾಲಪ್ಪ ಅಧಿಕಾರಿಗಳ ಕ್ರಮವನ್ನು ಖಂಡಿಸಿದರು. ಅಲ್ಲದೇ ತಕ್ಷಣ ಅಧಿಕಾರಿಗಳನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಅರಣ್ಯ ಇಲಾಖೆಯಿಂದ ತಾಳಗುಪ್ಪ ಗ್ರಾಮದ ಬಗರ್ ಹುಕುಂ ಸಾಗುವಳಿ ತೆರವು..