ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊಡಗಿನಲ್ಲಿ ಪ್ರತಿಭಟನೆ - ನರೇಂದ್ರ ಮೋದಿ
🎬 Watch Now: Feature Video
Published : Dec 15, 2023, 10:39 PM IST
ಮಡಿಕೇರಿ(ಕೊಡಗು): ವಿರಾಜಪೇಟೆ ಬ್ಲ್ಯಾಕ್ ಕಾಂಗ್ರೆಸ್, ನಗರ ಕಾಂಗ್ರೆಸ್ ವತಿಯಿಂದ ವಿರಾಜಪೇಟೆ ಗಡಿಯಾರ ಕಂಭದ ಬಳಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಮಾತನಾಡಿ, ಕೂಡಲೇ ಪ್ರತಾಪ್ ಸಿಂಹರನ್ನು ಬಂಧಿಸಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಂಸತ್ನಲ್ಲಿ ಸಂಸದರಿಗೆ ರಕ್ಷಣೆ ಇಲ್ಲ. ಇನ್ನು ಸಾರ್ವಜನಿಕರಿಗೆ ಇವರಿಂದ ರಕ್ಷಣೆ ನೀಡಲು ಸಾಧ್ಯವಿಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಮಿತ್ ಶಾ ರಾಜೀನಾಮೆ ಪಡೆಯಬೇಕು. ಪ್ರತಾಪ್ ಸಿಂಹ ಅವರನ್ನು ತಮ್ಮ ಸ್ಥಾನದಿಂದ ವಜಾ ಮಾಡಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಣ ರಂಜಿ ಪೂಣ್ಣಚ್ಚ, ಪಕ್ಷದ ಮುಖಂಡರಾದ ಗೋಪಾಲಕೃಷ್ಣ, ಸೇವಾದಳದ ಅಧ್ಯಕ್ಷರಾದ ಸಿ.ಕಾವೇರಪ್ಪ, ನಗರ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ರಾಜೇಶ್ ಪದ್ಮನಾಭ, ಮತಿನ್, ರಾಫಿ, ಅಲ್ಪಸಂಖ್ಯಾತರ ಘಟಕದ ಪ್ರಮುಖರಾದ ಜೋಕಿಂ, ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ: ಸಂಸತ್ ಭದ್ರತಾ ಲೋಪ: ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ