ಟೋಲ್ ದರ ಹೆಚ್ಚಳ ವಿರೋಧಿಸಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ರತಿಭಟನೆ - toll rate hike

🎬 Watch Now: Feature Video

thumbnail

By

Published : Jun 24, 2023, 3:04 PM IST

ರಾಮನಗರ: ಟೋಲ್ ದರ ಹೆಚ್ಚಳ ವಿರೋಧಿಸಿ ಜಿಲ್ಲೆಯ ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಬಳಿ ಇಂದು ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ದರ ಹೆಚ್ಚಳ ಹಿನ್ನೆಲೆ ವಿವಿಧ ಕನ್ನಡಪರ ಸಂಘಟನೆಗಳಿಂದ ಈ ಪ್ರತಿಭಟನೆ ನಡೆಸಲಾಯಿತು. ಹೆದ್ದಾರಿ ಪ್ರಾಧಿಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನೂತನ ದಶಪಥ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಏಕಾಏಕಿ ಶೇ. 22 ರಷ್ಟು ಟೋಲ್ ದರವನ್ನು ಪ್ರಾಧಿಕಾರ ಹೆಚ್ಚಳ ಮಾಡಿದೆ. ಕೂಡಲೇ ಹೆಚ್ಚಾಗಿರುವ ಟೋಲ್ ದರ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು. 

ದಶಪಥ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಸ್ತೆಯಲ್ಲೇ ಮಲಗಿ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉರುಳುಸೇವೆ ಮಾಡಿ, ದರ ಏರಿಕೆ ವಾಪಸ್​ ಪಡೆಯದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಕಿಡಿಕಾರಿದರು. ಹೆದ್ದಾರಿ ಟೋಲ್ ದರ ಏರಿಕೆ ಖಂಡಿಸಿ ರಸ್ತೆ ತಡೆಯಲು ಪ್ರತಿಭಟನಾಕಾರರು ಮುಂದಾದ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ‌ ನಡೆಯಿತು. ವಾಹನ ತಡೆಯಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.