ಯೋಧರ ಮೇಲೆ ಗ್ರೆನೇಡ್ ದಾಳಿ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ - ETV Bharat Karnataka
🎬 Watch Now: Feature Video
ಜಮ್ಮು ಮತ್ತು ಕಾಶ್ಮೀರ : ನಿನ್ನೆ (ಗುರುವಾರ)ಗಡಿ ಜಿಲ್ಲೆಯಾದ ಪೂಂಚ್ನಲ್ಲಿ ಯೋಧರ ಮೇಲೆ ನಡೆದ ದಾಳಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಭಟ ಧುರಿಯನ್ ಪ್ರದೇಶದ ಹೆದ್ದಾರಿಯಲ್ಲಿ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಚಲಿಸುತ್ತಿದ್ದ ಸೇನಾ ವಾಹನದ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದರು. ಇದರಿಂದ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಯೋಧರು ಹುತಾತ್ಮರಾಗಿದ್ದರು.
ಈ ಘಟನೆ ಹಿಂದೆ ಪಾಕಿಸ್ತಾನ ಮತ್ತು ಭಯೋತ್ಪಾದಕ ಸಂಘಟನೆಗಳ ಕೈವಾಡ ವಿದೆ ಎಂದು ಪ್ರತಿಭಟನ ನಿರತ ಬಿಜೆಪಿ ಕಾರ್ಯಕರ್ತರು ಆರೋಪಿಸಿದರು. ದುಷ್ಕಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಗ್ರೆನೇಡ್ ದಾಳಿಯಲ್ಲಿ ಹವಾಲ್ದಾರ್ ಮನ್ದೀಪ್ ಸಿಂಗ್, ಲ್ಯಾನ್ಸ್ ನಾಯಕ್ ದೇಬಾಶಿಶ್ ಬಸ್ವಾಲ್, ಲ್ಯಾನ್ಸ್ ನಾಯಕ್ ಕುಲ್ವಂತ್ ಸಿಂಗ್, ಸಿಪಾಯಿ ಹರ್ಕ್ರಿಶನ್ ಸಿಂಗ್ ಮತ್ತು ಸಿಪಾಯಿ ಸೇವಕ್ ಸಿಂಗ್ ಎಂಬ ಯೋಧರು ಹತಾತ್ಮರಾಗಿರುವುದಾಗಿ ಸೇನೆ ತಿಳಿಸಿದೆ. ಮತ್ತೊಂದೆಡೆ ಪೊಲೀಸರು ದುಷ್ಕಮಿಗಳ ಪತ್ತೆಗಾಗಿ ಚುರುಕಿನ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಗ್ರೆನೇಡ್ ದಾಳಿಯಲ್ಲಿ ಐವರು ಯೋಧರು ಹುತಾತ್ಮ: ಉಗ್ರರ ಬೇಟೆಗೆ ಕಾರ್ಯಾಚರಣೆ