ಮಣಿಪುರ, ಹರಿಯಾಣ ಘಟನೆಗಳಿಗೆ ಖಂಡನೆ: ಹುಬ್ಬಳ್ಳಿಯಲ್ಲಿ ಸರ್ವಧರ್ಮಗಳ ಒಕ್ಕೂಟದಿಂದ ಪ್ರತಿಭಟನೆ - ಈಟಿವಿ ಭಾರತ್​ ಕನ್ನಡ ನ್ಯೂಸ್

🎬 Watch Now: Feature Video

thumbnail

By

Published : Aug 7, 2023, 4:13 PM IST

ಹುಬ್ಬಳ್ಳಿ : ಮಣಿಪುರ, ಹರಿಯಾಣ ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾಚಾರ ಪ್ರಕರಣಗಳನ್ನು ಖಂಡಿಸಿ ಸರ್ವಧರ್ಮಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭವಾದ ರ‍್ಯಾಲಿ ಸ್ಟೇಶನ್ ರೋಡ್, ದುರ್ಗದಬೈಲ್, ಕೊಪ್ಪಿಕರ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಸಾಗಿ, ಚೆನ್ನಮ್ಮ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

"ಎರಡೂ ರಾಜ್ಯಗಳಲ್ಲಿ ಹಿಂಸಾಚಾರ ಹಾಗೂ ದೌರ್ಜನ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರ ಹಾಗೂ ಅಲ್ಲಿನ ರಾಜ್ಯ ಸರ್ಕಾರಗಳು ವಿಫಲವಾಗಿವೆ.‌ ಧಾರ್ಮಿಕ ಕಟ್ಟಡಗಳು ಹಾಗೂ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ್ದು ಖಂಡನೀಯ. ಕೇಂದ್ರ ಸರ್ಕಾರ ಇಂಥ ಘಟನಾವಳಿಗಳಿಗೆ ಕಡಿವಾಣ ಹಾಕಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು" ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಹಾನಗರ ಪಾಲಿಕೆ ಪ್ರತಿಪಕ್ಷದ ನಾಯಕಿ ಸುವರ್ಣ ಕಲ್ಲಕುಂಟ್ಲಾ, ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕಿ ಸುಧಾ ಮಣಿಕುಂಟ್ಲಾ, ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಸೇರಿದಂತೆ ಕ್ರೈಸ್ತ ಸಮುದಾಯ ಹಾಗೂ ವಿವಿಧ ಧರ್ಮಗಳ ಮುಖಂಡರು ಇದ್ದರು.     

ಇದನ್ನೂ ಓದಿ : ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ನಾಳೆ ಪ್ರತಿಭಟನೆ: ಈರಣ್ಣ ಕಡಾಡಿ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.