ಗೂಳಿ ಓಟಕ್ಕೆ ಅನುಮತಿ ನಿರಾಕರಿಸಿದ್ದಕ್ಕೆ ಆಕ್ರೋಶ: ಹೊಸೂರು-ಬೆಂಗಳೂರು ಹೆದ್ದಾರಿ ತಡೆ, ಬಸ್​ಗಳಿಗೆ ಕಲ್ಲು - ಈಟಿವಿ ಭಾರತ ಕನ್ನಡ

🎬 Watch Now: Feature Video

thumbnail

By

Published : Feb 2, 2023, 5:23 PM IST

Updated : Feb 3, 2023, 8:39 PM IST

ಕೃಷ್ಣಗಿರಿ(ತಮಿಳುನಾಡು): ಗೂಳಿ ಓಟದ ಸ್ಪರ್ಧೆಗೆ ಅನುಮತಿ ನೀಡಿಲ್ಲ ಎಂದು ರಸ್ತೆ ತಡೆದ ಜನರು ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿಂದು ನಡೆದಿದೆ. ಹೊಸೂರು ಪಕ್ಕದ ಗೋಪಚಂದ್ರ ಎಂಬಲ್ಲಿ ಗೂಳಿ ಓಟದ ಸ್ಪರ್ಧೆಗೆ ಸಿದ್ಧತೆ ನಡೆಸಲಾಗಿತ್ತು. ಅದರಂತೆ, ಇಂದು ಬೆಳಗ್ಗೆ ಗೂಳಿಗಳೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಲೆಂದು ಸಾವಿರಾರು ಯುವಕರು ಬಂದಿದ್ದರು. ಈ ಸಂದರ್ಭದಲ್ಲಿ ಪೊಲೀಸರು ತಡೆದು ಸ್ಪರ್ಧೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿಲ್ಲ ಎಂದು ತಿಳಿಸಿದ್ದಾರೆ. 

ಇದರಿಂದ ಕೋಪಗೊಂಡ ಯುವಕರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಯುವಕರನ್ನು ಚದುರಿಸಲು ಪೊಲೀಸರು ಮುಂದಾದಾಗ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸ್​ ಇಲಾಖೆಯ ವಾಹನ ಸೇರಿದಂತೆ ಸರ್ಕಾರಿ, ಖಾಸಗಿ ಬಸ್​ಗಳ ಮೇಲೂ ಕಲ್ಲು ತೂರಿದ್ದಾರೆ. ಬಳಿಕ ಜಿಲ್ಲಾಡಳಿತ ಓಟದ ಸ್ಪರ್ಧೆಗೆ ಅನುಮತಿ ನೀಡಿದೆ. ಸುಮಾರು ಮೂರು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಇದನ್ನೂ ಓದಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಗರ್ಭಿಣಿ ಸೇರಿ ಇಬ್ಬರು ಸಾವು 

Last Updated : Feb 3, 2023, 8:39 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.