ಮೊಬೈಲ್ ಕಳ್ಳನ ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು: ವಿಡಿಯೋ - etv bharat karnataka

🎬 Watch Now: Feature Video

thumbnail

By ETV Bharat Karnataka Team

Published : Sep 15, 2023, 5:21 PM IST

ಕೋಲಾರ: ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟ‌ನೆ ಕೋಲಾರ ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಜಗದೀಶ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಿಲ್ದಾಣದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​ನಲ್ಲಿ ಪ್ರಯಾಣಿಕನೋರ್ವನ ಮೊಬೈಲ್ ಎಗರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸಾರ್ವಜನಿಕರು ಹಾಗೂ ಕೆಎಸ್​ಆರ್​ಟಿಸಿ ಸಿಬ್ಬಂದಿ ಆತನನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ‌. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಅಪಹರಣವಾದ ಬಾಲಕನ ರಕ್ಷಣೆ: ಮತ್ತೊಂದೆಡೆ, ನಿನ್ನೆ(ಗುರುವಾರ) ಸಂಜೆ ಕೋಲಾರ ತಾಲೂಕಿನ ಅರಹಳ್ಳಿ ಗ್ರಾಮದಲ್ಲಿ ಯಶ್ವಿತ್ ಗೌಡ ಎಂಬ ಬಾಲಕನ ಅಪಹರಣವಾಗಿತ್ತು‌. ಪ್ರಕರಣದ ಬೆನ್ನತ್ತಿದ ಪೊಲೀಸರು ಕೇವಲ ಅರ್ಧ ಗಂಟೆಯಲ್ಲೇ ಅಪಹರಣಕಾರರನ್ನು ಬಂಧಿಸಿದ್ದಾರೆ. ಕೆಜಿಎಫ್ ತಾಲೂಕಿನ ಬೇತಮಂಗಲ ಮೂಲದ ವೆಂಕಟೇಶ್ ಹಾಗೂ ಅರಹಳ್ಳಿ ಗ್ರಾಮದ ಶ್ರೀಕಾಂತ್ ಬಂಧಿತರು. ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಹಾಡಹಗಲೇ ಮನೆಗೆ ನುಗ್ಗಿದ ಖದೀಮ.. ಮಹಿಳೆ ಮೇಲೆ ಹಲ್ಲೆಗೈದು ಲಕ್ಷಗಟ್ಟಲೆ ಹಣ ದರೋಡೆ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.