ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತ ವ್ಯಕ್ತಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ludhiyana
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-17944291-thumbnail-4x3-sas.jpg)
ಲೂಧಿಯಾನ (ಪಂಜಾಬ್): ಅಪರಿಚಿತ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ನುಗ್ಗಿ ಬಾಲಕಿಯರಿಗೆ ಚಾಕು ತೋರಿಸಿ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ಪಂಜಾಬ್ನ ಲೂಧಿಯಾನದ ಬಾಬಾ ಜಸ್ವಂತ್ ಡೆಂಟಲ್ ಕಾಲೇಜಿನಲ್ಲಿ ನಡೆದಿದೆ.
ಹೋಳಿ ಹಬ್ಬದ ದಿನದಂದು ಅಪರಿಚಿತ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ನುಗ್ಗಿ ಕತ್ತಿನಲ್ಲಿ ಚಾಕು ತೋರಿಸಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದು, ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಅಪರಿಚಿತ ವ್ಯಕ್ತಿಯು ಹಾಸ್ಟೆಲ್ಗೆ ಒಳಗೆ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಬಗ್ಗೆ ಲೂಧಿಯಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿನಿಯರು: ದುಬಾರಿ ಶುಲ್ಕವನ್ನು ನೀಡಿ ಕಾಲೇಜಿಗೆ ಓದಲು ಬಂದಿದ್ದೇವೆ, ಕಾಲೇಜಿನ ಒಳಗೆ ನಮಗೆ ಯಾವುದೇ ಭದ್ರತೆ ವ್ಯವಸ್ಥೆ ಇಲ್ಲ ಎಂದು ವಿದ್ಯಾರ್ಥಿನಿಯರು ಕಾಲೇಜು ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಇದೇ ಕಾಲೇಜಿನಲ್ಲಿ ಸಿಬ್ಬಂದಿಯೊಬ್ಬರು ನೀರಿನ ಟ್ಯಾಂಕ್ನಲ್ಲಿ ಶವವಾಗಿ ಪತ್ತೆಯಾಗಿದ್ದರು.
ಇದನ್ನೂ ಓದಿ: ಜಿ20 ಸಮ್ಮೇಳನದ ಸಭೆ: ವಾರಾಣಸಿಯಲ್ಲಿ ಬುಲ್ಡೋಜರ್‌ಗಳ ಮೂಲಕ 135 ಅಂಗಡಿಗಳ ನೆಲಸಮ