ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ರೈ ಭೇಟಿ, ಪೂಜೆ ಸಲ್ಲಿಕೆ
🎬 Watch Now: Feature Video
ಪುತ್ತೂರು (ದಕ್ಷಿಣ ಕನ್ನಡ): ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಚಂಡ ಬಹುಮತ ಪಡೆದು ಗೆಲುವು ದಾಖಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಅಶೋಕ್ ರೈ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ 4 ಸಾವಿರ ಮತಗಳ ಅಂತರದಿಂದ ಇವರು ಜಯಿಸಿದ್ದಾರೆ.
ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಸಿಕ್ಕಿತು. ಬಳಿಕ ನೇರವಾಗಿ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕುಟುಂಬ ಸಮೇತ ದೇವಸ್ಥಾನಕ್ಕೆ ಬಂದು ಮಹಾಲಿಂಗೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಈ ವೇಳೆ ಅಲ್ಲಿಯೂ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, ವಿಶೇಷವಾಗಿಯೇ ಶುಭಕೋರಿದರು. ನೆಚ್ಚಿನ ನಾಯಕ ಶಾಸಕರಾಗಿ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕಾರ್ಯಕರ್ತರು ಹಾಗೂ ಮುಖಂಡರು, ಹೂಹಾರ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು. ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಇದ್ದರು.
ಇದನ್ನೂ ಓದಿ: ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ: ಸಿಎಂ ಅಭ್ಯರ್ಥಿ ಇಂದೇ ಫೈನಲ್; ನಾಳೆ ಹೊಸ ಸಿಎಂ ಪ್ರಮಾಣ ಸಾಧ್ಯತೆ