ಘಟನಾ ಸ್ಥಳ ಪರಿಶೀಲಿಸಿದ ಸಚಿವ ಅಶ್ವಿನಿ ವೈಷ್ಣವ್, ಸಿಎಂ ನವೀನ್ ಪಟ್ನಾಯಕ್: ವಿಡಿಯೋ
🎬 Watch Now: Feature Video
ಬಾಲಸೋರ್ (ಒಡಿಶಾ): ಒಡಿಶಾ ರೈಲು ದುರಂತ ಸ್ಥಳಕ್ಕೆ ಸಿಎಂ ನವೀನ್ ಪಟ್ನಾಯಕ್ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಬೆಳಗ್ಗೆ ಭೇಟಿ ನೀಡಿ ಕಾರ್ಯಾಚರಣೆಯನ್ನು ಪರಿಶೀಲನೆ ನಡೆಸಿದರು. ಸಾಗುತ್ತಿರುವ ರಕ್ಷಣಾ ಕಾರ್ಯಾಚರಣೆ ಇನ್ನಷ್ಟು ಚುರುಕುಗೊಳಿಸಿ, ಜನರ ಪ್ರಾಣ ರಕ್ಷಣೆಗೆ ಸೂಚಿಸಿದರು. ಅಲ್ಲದೇ, ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸಚಿವರು ಇದೇ ವೇಳೆ ಆದೇಶಿಸಿದರು.
ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರಿನಿಂದ ಹೊರಟಿದ್ದ ಹೌರಾ ಎಕ್ಸ್ಪ್ರಸ್, ಹಳಿ ತಪ್ಪಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ 238 ಜನರು ಈವರೆಗೆ ಸಾವನ್ನಪ್ಪಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾಗೆ ಇಂದಿನ ತಮ್ಮ ಭೇಟಿಯನ್ನು ಮೊಟಕುಗೊಳಿಸಿ ಒಡಿಶಾದ ಬಾಲಸೋರ್‌ಗೆ ತೆರಳಿದರು. ಒಡಿಶಾ ಸರ್ಕಾರ ಇಂದು ಶೋಕಾಚರಣೆಯನ್ನು ಘೋಷಿಸಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದೆ.
ಇದನ್ನೂ ಓದಿ: ಒಡಿಶಾ ರೈಲು ದುರಂತ: ಸಹಾಯವಾಣಿ ಆರಂಭ, ಬೆಂಗಳೂರಿನಿಂದ ಹೊರಡುವ ರೈಲುಗಳು ರದ್ದು.. ಹಲವರ ಪರದಾಟ!