ಕಿತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ.. ಕೇಂದ್ರ ಸಚಿವ ರಾಜನಾಥ ಸಿಂಗ್ ನೇತೃತ್ವದಲ್ಲಿ ರೋಡ್ ಶೋ - ಈಟಿವಿ ಭಾರತ ಕನ್ನಡ
🎬 Watch Now: Feature Video
ಬೆಳಗಾವಿ: ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ರಾಜನಾಥ ಸಿಂಗ್ ಅವರ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಬೃಹತ್ ವಿಜಯ ಸಂಕಲ್ಪ ರಥಯಾತ್ರೆ ನಡೆಸಲಾಗುತ್ತಿದೆ. ಕಿತ್ತೂರಿನಲ್ಲಿ ವೀರರಾಣಿ ಚೆನ್ನಮ್ಮ ಮೂರ್ತಿಗೆ ಹಾರ ಹಾಕಿದ ಕೇಂದ್ರ ಸಚಿವರಾದ ರಾಜನಾಥ ಸಿಂಗ್ ಹಾಗೂ ಪ್ರಹ್ಲಾದ್ ಜೋಶಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಸಚಿವರು ಹಾಗೂ ಹಲವು ಬಿಜೆಪಿ ನಾಯಕರು ರೋಡ್ ಶೋ ಮತ್ತು ರಥಯಾತ್ರೆಯಲ್ಲಿ ಪಾಲ್ಗೊಂಡರು.
ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಪರವಾಗಿ ಕೇಂದ್ರ ಮತ್ತು ರಾಜ್ಯ ನಾಯಕರು ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದ್ದಾರೆ. ದಾರಿಯುದ್ದಕ್ಕೂ ಮೋದಿ ಹೆಸರಿನಲ್ಲಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರು ಘೋಷಣೆ ಕೂಗಿದರು. ಜತೆಗೆ ಯಾತ್ರೆ ವೇಳೆ ಬಿಜೆಪಿ ವರಿಷ್ಠರನ್ನು ಪುಷ್ಪವೃಷ್ಟಿ ಮೂಲಕ ಕಾರ್ಯಕರ್ತರು ಸ್ವಾಗತಿಸಿದರು. ಕಿತ್ತೂರು ಚೆನ್ನಮ್ಮನ ಪುತ್ಥಳಿಯಿಂದ ಕೋಟೆಯವರೆಗೆ ವಿಜಯ ಸಂಕಲ್ಪ ರಥಯಾತ್ರೆ ನಡೆಯಿತು.
ಇದನ್ನೂ ಓದಿ: ಯಡಿಯೂರಪ್ಪ ಕರ್ನಾಟಕಕ್ಕೆ ಮಾಡಿದ ಸೇವೆ ಬಿಜೆಪಿ ಎಂದಿಗೂ ಮರೆಯಲ್ಲ: ರಾಜನಾಥ ಸಿಂಗ್