ಸಿದ್ದರಾಮಯ್ಯಗೆ ಪ್ರಬಲ ಪೈಪೋಟಿ ನೀಡಲು ಬಿಜೆಪಿ ಬಿಗ್ ಪ್ಲಾನ್: ಸೋಮಣ್ಣನ ಗೆಲುವು ಅಷ್ಟು ಸಲೀಸಾ? - Calculation Of Assembly Constituency
🎬 Watch Now: Feature Video
ಮೈಸೂರು: ರಾಜ್ಯದ ಹೈವೋಲ್ಟೇಜ್ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಏರತೊಡಗಿದೆ. ಘಟಾನುಘಟಿಗಳಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ವಿ ಸೋಮಣ್ಣ ಸ್ಪರ್ಧೆಯಿಂದ ಜಿದ್ದಾಜಿದ್ದಿನ ಕದನವಾಗಿ ಮಾರ್ಪಟ್ಟಿದೆ. ಕೇವಲ ಮೂರೇ ಮೂರು ತಾಲೂಕುಗಳನ್ನು ಒಳಗೊಂಡ ಕೆಲವೇ ಕೆಲವು ಗ್ರಾಮಗಳನ್ನು ಒಳಗೊಂಡ ರೂಪಿತವಾಗಿರುವ ವರುಣಾ ರಾಜಕೀಯವಾಗಿ ತನ್ನದೇಯಾದ ವೈಶಿಷ್ಟ್ಯ ಹೊಂದಿರುವ ಮತ ಕ್ಷೇತ್ರ. ಕಳೆದ 15 ವರ್ಷಗಳಿಂದ ಸಿದ್ದರಾಮಯ್ಯ ಎರಡು ಬಾರಿ, ಅವರ ಮಗ ಒಂದು ಬಾರಿ ಆಯ್ಕೆಯಾಗುವ ಮೂಲಕ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಸಾಧಿಸಿದ್ದಾರೆ.
ತಮ್ಮ ರಾಜಕೀಯ ಜೀವನದ ಕೊನೆಯ ಚುನಾವಣೆ ಎದುರಿಸುತ್ತಿರುವ ಸಿದ್ದರಾಮಯ್ಯ, ಇದೀಗ ಮೂರನೇ ಬಾರಿಗೆ ತಮ್ಮ ತವರು ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಅಚ್ಚರಿಯ ಅಭ್ಯರ್ಥಿಯಾಗಿ ಬಿಜೆಪಿಯು ವಿ.ಸೋಮಣ್ಣ ಅವರನ್ನು ಅವರ ವಿರುದ್ಧ ಕಣಕ್ಕಿಳಿಸಿದೆ. ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸೋಮಣ್ಣ, ಪ್ರತಿ ಗ್ರಾಮಗಳಿಗೂ ಪ್ರಚಾರ ಆರಂಭಿಸಿದ್ದಾರೆ. ಈಗಾಗಲೇ ಕೇಂದ್ರದ ಗೃಹ ಸಚಿವ ಅಮಿತ್ ಶಾ, ಯಡಿಯೂರಪ್ಪ, ಸಂಸದ ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಚಿತ್ರ ನಟರು, ಕೇಂದ್ರದ ನಾಯಕರುಗಳು ಸೋಮಣ್ಣ ಪರ ಪ್ರಚಾರ ಆರಂಭಿಸಿದ್ದಾರೆ. ಸೋಮಣ್ಣ ಅವರನ್ನು ಗೆಲ್ಲಿಸಿದರೆ, ಅವರು ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ ಎಂಬ ಶಾ ಅವರ ಘೋಷಣೆ ವರುಣಾದಲ್ಲಿ ಚರ್ಚೆಗೆ ತಂದು ನಿಲ್ಲಿಸಿದೆ.
ಇದನ್ನೂ ಓದಿ: ಬಜರಂಗದಳಕ್ಕೆ ಅವಮಾನಿಸುವ ಪಕ್ಷಕ್ಕೆ ಸೇರಿರುವ ಸವದಿಯನ್ನು ಸೋಲಿಸಿ: ಅಮಿತ್ ಶಾ ಕರೆ