'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡಿಗೆ ಹೆಜ್ಜೆ ಹಾಕಿದ MP, MLA, DC - VIDEO - ಸುವರ್ಣ ಕರ್ನಾಟಕ ಜ್ಯೋತಿ ರಥಯಾತ್ರೆ
🎬 Watch Now: Feature Video
Published : Nov 3, 2023, 1:42 PM IST
ಕೊಪ್ಪಳ: ರಾಜ್ಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಹಬ್ಬದಂತೆ ಆಚರಿಸಲಾಯಿತು. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಕನ್ನಡ ಜ್ಯೋತಿ ರಥಯಾತ್ರೆ ಸ್ವಾಗತದಲ್ಲಿ ಸಂಸದ ಸಂಗಣ್ಣ ಕರಡಿ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಡಿಸಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ರತ್ನಂ ಪಾಂಡೇಯ ಅವರು ಡಾ. ರಾಜ್ ಕುಮಾರ್ ಹಾಡಿದ "ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು.." ಹಾಡಿಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.
ಮುನಿರಾಬಾದ್ನಲ್ಲಿ ಗುರುವಾರ ರಾತ್ರಿ ಸುವರ್ಣ ಕರ್ನಾಟಕ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಲಾಯಿತು. ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕ ಜನಾರ್ದನ ರೆಡ್ಡಿ ಅವರು ಕೋಲು ಹಿಡಿದು ಮಕ್ಕಳ ಜೊತೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಹಾಗೆಯೇ ಡಿಸಿ, ಸಿಇಓ ಸೇರಿ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಅಣ್ಣಾವ್ರ ಹಾಡಿಗೆ ಕುಣಿದು ಸಂಭ್ರಮಿಸಿದರು.
ಬಳಿಕ ಮಾತನಾಡಿದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಚುನಾವಣೆಗೂ ಮುನ್ನ ಘೋಷಿತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ. ಈ ತಿಂಗಳ ಅಂತ್ಯದಿಂದ ಕೆಆರ್ಪಿಪಿ ಪಕ್ಷದ ಹೋರಾಟ ಆರಂಭವಾಗುವುದು. ಲೋಕಸಭಾ ಚುನಾವಣೆಯ ಸಿದ್ಧತೆ ಮಾಡಿಕೊಳ್ಳುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಾಸಕರು ಹೇಳಿದರು.
ಇದನ್ನೂ ನೋಡಿ: ಹಂಪಿಯಲ್ಲಿ ವೀರ ಮಕ್ಕಳ ಕುಣಿತಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸ್ಟೆಪ್ಸ್: ವಿಡಿಯೋ