ಚಂದ್ರಯಾನ 3: ಐತಿಹಾಸಿಕ ಉಡಾವಣೆ ಕಣ್ತುಂಬಿಕೊಂಡ ಶಾಲಾ ವಿದ್ಯಾರ್ಥಿಗಳ ಸಂತಸ.. ವಿಡಿಯೋ - childrens witness the historic launch cheered

🎬 Watch Now: Feature Video

thumbnail

By

Published : Jul 14, 2023, 4:26 PM IST

ಶ್ರೀಹರಿಕೋಟಾ (ಆಂಧ್ರಪ್ರದೇಶ): ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆ ಇಂದು ಚಂದ್ರಯಾನ 3 ಗಗನ ನೌಕೆಯ ಉಡಾವಣೆಯನ್ನು ಯಶಸ್ವಿಯಾಗಿ ಮಾಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಚಂದ್ರಯಾನ 3 ಮಿಷನ್​ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಈ ಐತಿಹಾಸಿಕ ಉಡಾವಣೆಯನ್ನು ಸಾವಿರಾರು ಜನರು ಹಾಗೂ ವಿದ್ಯಾರ್ಥಿಗಳು ಕಣ್ತುಂಬಿಕೊಳ್ಳಲು ನೆರೆದಿದ್ದರು. ಗಗನಕ್ಕೆ ರಾಕೆಟ್ ಚಿಮ್ಮುತ್ತಿದ್ದಂತೆ ವಿದ್ಯಾರ್ಥಿಗಳು ಸಂಭ್ರಮಿಸಿದರು.

ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾಗಿ ಉಡಾವಣೆ ಮಾಡಿದ ನಂತರ ನೆರೆದಿದ್ದ ಶಾಲಾ ವಿದ್ಯಾರ್ಥಿಗಳು ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ವಿಜ್ಞಾನಿಗಳು ಮತ್ತು ದೇಶವು ತುಂಬಾ ಒಳ್ಳೆಯದನ್ನು ಮಾಡುತ್ತಿದೆ. ಇದಕ್ಕಾಗಿ ನಾನು ತುಂಬಾ ಹೆಮ್ಮೆಪಡುತ್ತೇನೆ. ಚಂದ್ರಯಾನ 3 ಗಗನ ನೌಕೆ ಉಡಾವಣೆಯು ಕ್ಷಣವು ನಮ್ಮ ಜೀವನದಲ್ಲಿ ಒಮ್ಮೆ ಮಾತ್ರ ಸವಿಯಲು ಸಿಗುವ ಅನುಭವವಾಗಿದೆ. ಇದರಿಂದ ತುಂಬಾ ಸಂತೋಷವಾಗಿದೆ ಎಂದು ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. 

 ಚಂದ್ರಯಾನ 3 ಗಗನ ನೌಕೆಯ ಉಡಾವಣೆ ಯಶಸ್ವಿಯಾದ ಬಳಿಕ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳು ಸಂಸತ ಪಟ್ಟರು. ಜೊತೆಗೆ ವಿಜ್ಞಾನಿಗಳ ತಂಡಕ್ಕೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಹಲವು ಗಣ್ಯರು ಸಹ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 

ಇದನ್ನೂ ಓದಿ: Chandrayaan 3 mission: ಯಶಸ್ವಿಯಾಗಿ ನಭಕ್ಕೆ ಜಿಗಿದ ಬಾಹುಬಲಿ.. ಚಂದ್ರನತ್ತ ಪ್ರಯಾಣ ಶುರು ಎಂದ ಇಸ್ರೋ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.